Saturday, May 18, 2024
Homeತಾಜಾ ಸುದ್ದಿಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕುಟುಂಬಕ್ಕೆ ಇನ್ಮುಂದೆ ನಿರಂತರ ಬೆಳಕು

ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕುಟುಂಬಕ್ಕೆ ಇನ್ಮುಂದೆ ನಿರಂತರ ಬೆಳಕು

spot_img
- Advertisement -
- Advertisement -

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪ್ರಮಾಣವನ್ನು 40 ಯುನಿಟ್ ನಿಂದ 75 ಯುನಿಟ್ ಗೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರಕಾರ ತೆಗೆದುಕೊಂಡಿದೆ.

ಇದರಿಂದ ಇಂಧನ ಇಲಾಖೆಗೆ ವಾರ್ಷಿಕ 979 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದ್ದು, ಇದೇ ತಿಂಗಳಿಂದ ಯೋಜನೆಯ ಲಾಭ ಫಲಾನುಭವಿಗಳಿಗೆ ಲಭ್ಯವಾಗಲಿದೆ.


ಇದಕ್ಕೆ ಸಂಬಂಧಪಟ್ಟ ಕಡತ ಈಗಾಗಲೇ ಹಣಕಾಸು ಇಲಾಖೆಗೆ ರವಾನೆಯಾಗಿದ್ದು, ಇನ್ನೆರಡು ದಿನದಲ್ಲಿ ಅಧಿಕೃತ ಆದೇಶ ಪ್ರಕಟವಾಗಲಿದೆ. ಆದರೆ ಇದಕ್ಕೆ ಸಂಬಂಧಪಟ್ಟ ಎಲ್ಲ ಪ್ರಕ್ರಿಯೆಗಳನ್ನು ಇಂಧನ ಇಲಾಖೆ ಪೂರ್ಣಗೊಳಿಸಿದ್ದು, ಭಾಗ್ಯಜ್ಯೋತಿ ಹಾಗೂ ಕುಟಿರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವವರೂ ಸೇರಿದಂತೆ ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳ ಮನೆಯಲ್ಲಿ ಇನ್ನು ಮುಂದೆ ವಿದ್ಯುತ್ “ನಿರಂತರ”ವಾಗಲಿದೆ.
ಮಾಜಿ ಉಪ ಪ್ರಧಾನಿ ದಿ. ಬಾಬು ಜಗಜೀವನ್ ರಾಮ್ ಅವರ ೧೧೫ ಜಯಂತಿ ಸಮಾರಂಭದಲ್ಲಿ ಗ್ರಾಮೀಣ ಪ್ರದೇಶದ ಭಾಗ್ಯ ಜ್ಯೋತಿ ಹಾಗೂ ಕುಟಿರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಕುಟುಂಬಗಳಿಗೆ ಹಾಲಿ ಉಚಿತವಾಗಿ ನೀಡುತ್ತಿದ್ದ 40 ಯುನಿಟ್ ವಿದ್ಯುತ್ ಅನ್ನು 75 ಯುನಿಟ್ ಹೆಚ್ಚಿಸಲಾಗುವುದು ಎಂದು ಏಪ್ರೀಲ್ 5 ರಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಇಂಧನ ಇಲಾಖೆಗೆ ಕಡತ ರವಾನೆಯಾಗಿತ್ತು.

- Advertisement -
spot_img

Latest News

error: Content is protected !!