Wednesday, June 24, 2026
Homeತಾಜಾ ಸುದ್ದಿಎಸ್ ಡಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿ ವೆಂಟಿಲೇಟರ್ ಸಿಗದೇ ಕೊರೊನಾಗೆ ಬಲಿ

ಎಸ್ ಡಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿ ವೆಂಟಿಲೇಟರ್ ಸಿಗದೇ ಕೊರೊನಾಗೆ ಬಲಿ

- Advertisement -
- Advertisement -

ಚಿಕ್ಕಮಗಳೂರು ಕೊರೊನಾ ಸೋಂಕಿಗೆ ಒಳಗಾಗಿದ್ದ ಎಸ್ ಡಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿ ಚಿಕ್ಕಮಗಳೂರಿನ ಮೂಡಿಗೆರೆಯ ಮತ್ತಿಕಟ್ಟೆ ಮೂಲದ ಮೇಘರಾಜ್ (31) ವೆಂಟಿಲೇಟರ್ ಸಿಗದೇ ಸಾವನ್ನಪ್ಪಿದ್ದಾರೆ.

ಕೊರೊನಾ ಸೋಂಕಿಗೆ ತುತ್ತಾಗಿದ್ದ ಮೇಘರಾಜ್ ಅವರನ್ನು ಚಿಕ್ಕಮಗಳೂರಿನ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಜನರಲ್ ವಾರ್ಡ್ ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ವೆಂಟಿಲೇಟರ್ ಸಿಗದೇ ಅವರು ಸಾವನ್ನಪ್ಪಿದ್ದಾರೆ.

ಇನ್ನು ಮೇಘರಾಜ್ ಪೋಷಕರು ಅವರನ್ನು ಐಸಿಯುಗೆ ಶಿಫ್ಟ್ ಮಾಡುವಂತೆ ಆಸ್ಪತ್ರೆ ಸಿಬ್ಬಂದಿ ಬಲಿ ಪರಿಪರಿಯಾಗಿ ಬೇಡಿ ಕೊಂಡಿದ್ದಾರೆ. ಆದ್ರೆ ಕೊನೆ ಕ್ಷಣದವರೆಗೂ ಶಿಫ್ಟ್ ಮಾಡಿಲ್ಲ. ಹಾಗಾಗಿ ಸೂಕ್ತ ಚಿಕಿತ್ಸೆ ಸಿಗದೇ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!