Monday, May 6, 2024
Homeಕರಾವಳಿಕಬಕ: ಸ್ವಾತಂತ್ರ್ಯ ರಥ ಸಂಚರಿಸುವಾಗ ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ತಡೆ: ವೀರ ಸಾವರ್ಕರ್ ಫೋಟೊ ತೆಗೆದು ಟಿಪ್ಪು...

ಕಬಕ: ಸ್ವಾತಂತ್ರ್ಯ ರಥ ಸಂಚರಿಸುವಾಗ ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ತಡೆ: ವೀರ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ಕಿರಿಕ್!

spot_img
- Advertisement -
- Advertisement -

ಪುತ್ತೂರು: ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್ ಡಿ.ಪಿ.ಐ ಕಾರ್ಯಕರ್ತರು ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ ಘಟನೆ ಆ.15ರಂದು ನಡೆದಿದೆ.

ಗ್ರಾಮ ಪಂಚಾಯತ್ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ವಿನಯ್ ಕುಮಾರ್ ಕಲ್ಲೇಗ ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆ ಒಡಿದ್ದಾರೆ.

ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಒರವರು ಸಮಾಧಾನ ಮಾಡಿದರು ಕೇಳಿಸಿಕೊಳ್ಳದ ತಂಡ ವೀರ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ಪಟ್ಟು ಹಿಡಿದಿದ್ದಾರೆ . ಈ ಬಗ್ಗೆ ಮಾಹಿತಿ ಅರಿತ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ ನಾಯ್ಕ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ

- Advertisement -
spot_img

Latest News

error: Content is protected !!