Saturday, June 6, 2026
Homeಕರಾವಳಿಕಬಕ: ಸ್ವಾತಂತ್ರ್ಯ ರಥಕ್ಕೆ ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ತಡೆ ಪ್ರಕರಣ:ಮೂವರನ್ನು ವಶಕ್ಕೆ ಪಡೆದ ಪೊಲೀಸರು!

ಕಬಕ: ಸ್ವಾತಂತ್ರ್ಯ ರಥಕ್ಕೆ ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ತಡೆ ಪ್ರಕರಣ:ಮೂವರನ್ನು ವಶಕ್ಕೆ ಪಡೆದ ಪೊಲೀಸರು!

- Advertisement -
- Advertisement -

ವಿಟ್ಲ:ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್ ಡಿ.ಪಿ.ಐ ಕಾರ್ಯಕರ್ತರು ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

ಕಬಕ ಗ್ರಾ.ಪಂ ವತಿಯಿಂದ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಚಾಲನೆ ಕೊಡುವ ಸಂದರ್ಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿದ್ದ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ್ದರು.

ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಒರವರು ಸಮಾಧಾನ ಮಾಡಿದರು ಕೇಳಿಸಿಕೊಳ್ಳದ ತಂಡ ವೀರ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ಪಟ್ಟು ಹಿಡಿದಿದ್ದಾರೆ . ಈ ಬಗ್ಗೆ ಮಾಹಿತಿ ಅರಿತ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ ನಾಯ್ಕ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಪ್ರತಿಭಟನಾಕಾರರನ್ನು ಚದುರಿಸಿದ್ದರು.

ನಂತರದ ಬೆಳವಣಿಗೆಯಲ್ಲಿ ಸ್ವಾತಂತ್ರ ಸ್ವರಾಜ್ಯ ರಥ ಅಡ್ಡಿ ಪಡಿಸಿ ದೇಶದ್ರೋಹದ ಕೃತ್ಯ ಮಾಡಿರುವುದಾಗಿ ಕಬಕ ಗ್ರಾ.ಪಂ ನೀಡಿದ ದೂರಿನಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!