Thursday, November 26, 2026
Homeಕರಾವಳಿಮಂಗಳೂರುಬಂಟ್ವಾಳ; ಬ್ರಹ್ಮರಕೂಟ್ಲು ಟೋಲ್ ಗೇಟ್‌ಗೆ ಎಸ್‌ಡಿಪಿಐ ಕಾರ್ಯಕರ್ತರ ಮುತ್ತಿಗೆ: ಬ್ಯಾರಿಯರ್ ಕಿತ್ತೆಸೆದು ದಾಂಧಲೆ

ಬಂಟ್ವಾಳ; ಬ್ರಹ್ಮರಕೂಟ್ಲು ಟೋಲ್ ಗೇಟ್‌ಗೆ ಎಸ್‌ಡಿಪಿಐ ಕಾರ್ಯಕರ್ತರ ಮುತ್ತಿಗೆ: ಬ್ಯಾರಿಯರ್ ಕಿತ್ತೆಸೆದು ದಾಂಧಲೆ

- Advertisement -
- Advertisement -

ಬಂಟ್ವಾಳ: ಉಪ್ಪಿನಂಗಡಿ ಬಳಿ ನೂತನ ಟೋಲ್ ಗೇಟ್ ಆರಂಭಗೊಂಡಿರುವುದನ್ನು ವಿರೋಧಿಸಿ ಎಸ್‌ಡಿಪಿಐ (SDPI) ಕಾರ್ಯಕರ್ತರು ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಕ್ಕೆ ದಿಢೀರ್ ಮುತ್ತಿಗೆ ಹಾಕಿ ದಾಂದಲೆ ನಡೆಸಿರುವ ಘಟನೆ ಗುರುವಾರ ನಡೆದಿದೆ.

ಉಪ್ಪಿನಂಗಡಿ ಸಮೀಪ ಹೊಸ ಟೋಲ್ ಗೇಟ್ ಕಾರ್ಯಾರಂಭ ಮಾಡಿರುವುದರಿಂದ ಆಕ್ರೋಶಗೊಂಡ ಕಾರ್ಯಕರ್ತರು, ಏಕಾಏಕಿ ಬ್ರಹ್ಮರಕೂಟ್ಲು ಟೋಲ್ ಕೇಂದ್ರಕ್ಕೆ ನುಗ್ಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಟೋಲ್‌ನ ಸಿಸಿಟಿವಿ ಕ್ಯಾಮೆರಾಗಳನ್ನು ಜಖಂಗೊಳಿಸಿದ ಕಾರ್ಯಕರ್ತರು, ಸಿಬ್ಬಂದಿ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಅಲ್ಲದೆ, ಟೋಲ್ ಗೇಟ್‌ನ ಬೂಮ್ ಬ್ಯಾರಿಯರ್‌ಗಳನ್ನು ಕಿತ್ತುಹಾಕಿದ ಪ್ರತಿಭಟನಾಕಾರರು, ಸುಂಕ ವಸೂಲಾತಿಯನ್ನು ತಡೆದು ವಾಹನಗಳನ್ನು ಉಚಿತವಾಗಿ ಸಂಚರಿಸಲು ಅನುವು ಮಾಡಿಕೊಟ್ಟರು. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ, ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

- Advertisement -

Latest News

error: Content is protected !!