Tuesday, June 30, 2026
Homeತಾಜಾ ಸುದ್ದಿಪ್ರವೀಣ್ ಹತ್ಯೆಯಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಕೈವಾಡ: ಕೇಂದ್ರ ಸಚಿವ ಜೋಶಿ ಆರೋಪ

ಪ್ರವೀಣ್ ಹತ್ಯೆಯಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಕೈವಾಡ: ಕೇಂದ್ರ ಸಚಿವ ಜೋಶಿ ಆರೋಪ

- Advertisement -
- Advertisement -

ದುಷ್ಕರ್ಮಿಗಳು ನಡೆಸಿದ ದಾಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿದೆ. ಈ ಕೃತ್ಯ ಎಸಗಿದವರನ್ನು ಯಾವುದೇ ಮುಲಾಜಿಲ್ಲದೆ ಬಂಧಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹತ್ಯೆ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಲ್ಹಾದ ಜೋಶಿ, ” ಈ ಪ್ರಕರಣದ ಕುರಿತ ಆರಂಭಿಕ ವರದಿಗಳು ಮತ್ತು ಕೆಲವು ಮಾಧ್ಯಮ ವರದಿಗಳು ತಿಳಿಸಿರುವಂತೆ ಹತ್ಯೆಯಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಕೈವಾಡವಿದೆ ಎಂಬುದನ್ನು ಸೂಚಿಸುತ್ತಿವೆ. ಇನ್ನು ಕೇರಳದಲ್ಲಿ ಅವರಿಗೆ ಪ್ರೋತ್ಸಾಹ ನೀಡಲಾಗುತ್ತಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಕೂಡಾ ಇಂಥವರನ್ನ ಪ್ರೋತ್ಸಾಹಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಇನ್ನು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪಿಎಫ್‌ಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆದಿದ್ದರು. ಈ ರೀತಿ ಪಿಎಫ್ಐಗೆ ಕಾಂಗ್ರೆಸ್ ಪ್ರೋತ್ಸಾಹ ನೀಡುತ್ತಿದ್ದು, ಬಿಜೆಪಿ ಯುವಮೋರ್ಚಾ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ” ಎಂದು ಜೋಶಿ ಹೇಳಿದ್ದಾರೆ.

ಪ್ರವೀಣ್ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಲ್ಹಾದ್ ಜೋಶಿ, ” ನಮ್ಮ ಕಾರ್ಯಕರ್ತನ ಹತ್ಯೆಯಾಗಿದೆ‌. ಎಲ್ಲರಿಗೂ ಪಾಠವಾಗುವಂತೆ ಶಿಕ್ಷೆ ಆಗಬೇಕು. ಆ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುವ ವಿಶ್ವಾಸವಿದೆ” ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!