Friday, March 29, 2024
HomeUncategorizedಪಿ ಎಫ್ ಐ ಮತ್ತು ಎಸ್.ಡಿ.ಪಿ.ಐ ಮುಖಂಡರ ಮನೆಗಳಿಗೆ ಹಾಗೂ ಕಚೇರಿಗಳಿಗೆ ಎನ್ಐಎ ದಾಳಿ :...

ಪಿ ಎಫ್ ಐ ಮತ್ತು ಎಸ್.ಡಿ.ಪಿ.ಐ ಮುಖಂಡರ ಮನೆಗಳಿಗೆ ಹಾಗೂ ಕಚೇರಿಗಳಿಗೆ ಎನ್ಐಎ ದಾಳಿ : ಪುತ್ತೂರಿನಲ್ಲಿ ದಾಳಿ ಖಂಡಿಸಿ ಪಿಎಫ್ ಐ ಮತ್ತು ಎಸ್ ಡಿ ಪಿ ಐ ಪ್ರತಿಭಟನೆ

spot_img
- Advertisement -
- Advertisement -

ಪುತ್ತೂರು: ಇಂದು ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ದಳ ಹಾಗೂ ಸ್ಥಳೀಯ ಪೊಲೀಸರ ತಂಡ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ದಾಳಿ ನಡೆಸಿ ಪಿ ಎಫ್ ಐ ಮತ್ತು ಎಸ್.ಡಿ.ಪಿ.ಐ ಸಂಘಟನೆಯ ಹಲವರನ್ನು ವಶಕ್ಕೆ ಪಡೆದುಕೊಂಡಿದೆ.

ಪಿ ಎಫ್ ಐ ಮತ್ತು ಎಸ್.ಡಿ.ಪಿ.ಐ ಮುಖಂಡರ ಮನೆಗಳಿಗೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಿದ ಪೊಲೀಸ್ ತಂಡ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಪುತ್ತೂರಿನ ಸಾಮೆತ್ತಡ್ಕದಲ್ಲಿರುವ ಎಸ್.ಡಿ. ಪಿ.ಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ಮತ್ತು ಉಪ್ಪಿನಂಗಡಿಯ ಎಸ್.ಡಿ.ಪಿ.ಐ ಮುಖಂಡ ಆಯುಬ್ ಅಗ್ನಾಡಿ ಮನೆಯನ್ನು ಶೋಧ ಮಾಡಿರುವ ಪೊಲೀಸರು ಹಲವು ದಾಖಲೆಗಳನ್ನು ಸಂಗ್ರಹಿಸಿದ್ದಾರೆ.

ಎಸ್‌.ಡಿ.ಪಿ.ಐ ಮುಖಂಡರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಪಿಎಫ್ ಐ ಮತ್ತು ಎಸ್ ಡಿ ಪಿ ಐ ಸಂಘಟನೆಯ ಕಾರ್ಯಕರ್ತರು ಪುತ್ತೂರಿನ ದರ್ಬೆ ವೃತ್ತದ ಬಳಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಸಾಮೆತ್ತಡ್ಕದ ಎಸ್ ಟಿ ಪಿ ಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ನನ್ನು ಪೊಲೀಸರು ಇದೇ ಸಂದರ್ಭದಲ್ಲಿ ವಶಕ್ಕೆ ಪಡೆದು ವಿಚಾರಣೆಗಾಗಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

- Advertisement -
spot_img

Latest News

error: Content is protected !!