Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸರಕಾರಿ ಆಸ್ಪತ್ರೆಗೆ ಕೆಲ ದಿನಗಳಿಂದ ಅನಾರೋಗ್ಯ : ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು...

ಬೆಳ್ತಂಗಡಿ : ಸರಕಾರಿ ಆಸ್ಪತ್ರೆಗೆ ಕೆಲ ದಿನಗಳಿಂದ ಅನಾರೋಗ್ಯ : ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು ಮನವಿ

- Advertisement -
- Advertisement -

ಬೆಳ್ತಂಗಡಿ: ಸಾರ್ವಜನಿಕ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ, ಔಷಧಿಗಳ ಅಭಾವ ಹಾಗೂ ರೋಗಿಗಳ ಬಗೆಗಿನ ನಿರ್ಲಕ್ಷ್ಯ ನಡೆಯುತ್ತಿರುವ ಕುರಿತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ತಾಲೂಕು ತಹಶೀಲ್ದಾರರು ಹಾಗೂ ಆರೋಗ್ಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಪಕ್ಷದ ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಆಗಮಿಸುವ ಬಡ ಹಾಗೂ ಸಾಮಾನ್ಯ ರೋಗಿಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ಆರೋಪಿಸಲಾಗಿದೆ. ಆಸ್ಪತ್ರೆಯಲ್ಲಿ NS ಡ್ರಿಪ್ಸ್, ಕ್ಯಾನೂಲಾ, ಗ್ಲವ್ಸ್, ಮಾಸ್ಕ್ ಸೇರಿದಂತೆ ಅಗತ್ಯ ವೈದ್ಯಕೀಯ ಸಾಮಗ್ರಿಗಳ ಕೊರತೆಯಿದೆ ಎಂದು ಅನೇಕ ರೋಗಿಗಳನ್ನು ದಾಖಲಿಸಿಕೊಳ್ಳಲು ನಿರಾಕರಿಸಲಾಗುತ್ತಿದೆ ಎಂಬ ದೂರು ಸಾರ್ವಜನಿಕರಿಂದ ಕೇಳಿಬರುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಪುರುಷರ ವಾರ್ಡ್‌ನಲ್ಲಿರುವ ಹಲವು ಫ್ಯಾನ್‌ಗಳು ಕಳೆದ ಒಂದು ತಿಂಗಳಿನಿಂದ ಕೆಟ್ಟು ನಿಂತಿದ್ದರೂ ದುರಸ್ತಿ ಮಾಡಲಾಗಿಲ್ಲ. ತುರ್ತು ಸೇವೆಗಾಗಿ ಇರುವ ಆಂಬುಲೆನ್ಸ್‌ಗಳಿಗೆ ಡೀಸೆಲ್ ಇಲ್ಲ ಎಂಬ ಕಾರಣ ನೀಡಿ ಸೇವೆ ನೀಡಲಾಗುತ್ತಿಲ್ಲ ಎಂದು ತಿಳಿದು ಬಂದಿದ್ದು ಸಾರ್ವಜನಿಕರು ಸಂಕಷ್ಟ ಅನಿಭವಿಸುವಂತಾಗಿದೆ ಈ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಎಲ್ಲಾ ಸಮಸ್ಯೆಗಳು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತಿದ್ದು, ಸಾರ್ವಜನಿಕ ಆರೋಗ್ಯ ಸೇವೆಯ ಮೇಲೆ ಜನರ ವಿಶ್ವಾಸ ಕುಸಿಯುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದೆ.

ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿ ಹಾಗೂ ವೈದ್ಯಕೀಯ ಸಾಮಗ್ರಿಗಳ ಸಮರ್ಪಕ ದಾಸ್ತಾನು ಒದಗಿಸುವುದು, ರೋಗಿಗಳನ್ನು ದಾಖಲಿಸಿಕೊಳ್ಳಲು ನಿರಾಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವುದು, ವಾರ್ಡ್‌ನಲ್ಲಿರುವ ಕೆಟ್ಟ ಫ್ಯಾನ್‌ಗಳನ್ನು ತಕ್ಷಣ ದುರಸ್ತಿ ಮಾಡಿಸುವುದು, ಆಂಬುಲೆನ್ಸ್ ಸೇವೆಯನ್ನು ನಿರಂತರವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳುವುದು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಂತೆ ಆಸ್ಪತ್ರೆಯ ಆಡಳಿತ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸಬೇಕು ಎಂದು ಮನವಿಯಲ್ಲಿ ಪಕ್ಷ ಒತ್ತಾಯಿಸಿದೆ.ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ಆರೋಗ್ಯ ಸಚಿವರಿಗೆ ಜಿಲ್ಲಾ ಆರೋಗ್ಯಾಧಿಕಾರಿ ಅವರಿಗೆ ಮನವಿಗಳನ್ನು ಸಲ್ಲಿಸಲಾಗಿದೆ.

ಮನವಿ ಸಲ್ಲಿಸಿದ ಬಳಿಕ ಮುಖಂಡರು ತಾಲೂಕು ಆಸ್ಪತ್ರೆ ಒಳಗಡೆ ಭೇಟಿ ನೀಡಿ ವೈದ್ಯರೊಂದಿಗೆ ಸಮಸ್ಯೆ ಬಗೆಹರಿಸಲು ಮನವಿ ಮಾಡಿದರು. ಪ್ರತ್ಯಕ್ಷವಾಗಿ ಹಲವು ರೋಗಿಗಳ ಸಮಸ್ಯೆಗಳನ್ನು ನೋಡಿ ಈ ಕುರಿತು ವೈದ್ಯರಿಗೆ ಸಲಹೆ ನೀಡಿ ವೇಗವಾಗಿ ಸಮಸ್ಯೆ ಬಗೆಹರಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ, ಕ್ಷೇತ್ರ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿಹ್ ಮದ್ದಡ್ಕ, ಅಶ್ರಫ್ ಕಟ್ಟೆ, ನಗರ ಸಮಿತಿ ಅಧ್ಯಕ್ಷ ರಿಯಾಝ್ ಬೆಳ್ತಂಗಡಿ, ಉಜಿರೆ ಬ್ಲಾಕ್ ಅಧ್ಯಕ್ಷ ಸಲೀಂ ಲಾಯಿಲ, ರಶೀದ್ ಲಾಯಿಲ, ಸ್ವಾದಿಕ್ ಲಾಯಿಲ ಉಪಸ್ಥಿತರಿದ್ದರು.

ಆಸ್ಪತ್ರೆಯಲ್ಲಿ ಬರುವ ರೋಗಿಗಳಿಗೆ ಸರಿಯಾಗಿ ಚುಕಿತ್ಸೆ ನೀಡಲಾಗುತ್ತಿಲ್ಲ ರೋಗಿಗಳಿಗೆ ಅಗತ್ಯ ಮಾತ್ರೆಗಳನ್ನು ಹೊರಗಿನಿಂದ ತರುವಂತೆ ಹೇಳುತ್ತಿದ್ದಾರೆ, ಇಲ್ಲಿ ಬರುವ ಔಷಧಗಳು ಎಲ್ಲಿ ಹೋಗುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ಇತ್ತೀಚೆಗೆ ಅವಧಿ ಮೀರಿದ ಔಷಧಗಳ ನ್ನು ಹಾಗೂ ಇತರ ವಸ್ತುಗಳನ್ನು ಆಸ್ಪತ್ರೆ ಆವರಣದಲ್ಲಿಯೇ ಸುಟ್ಟು ಹಾಕಲಾಗಿತ್ತು ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಆಸ್ಪತ್ರೆಯ ಅವ್ಯವಸ್ಥೆಗಳ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಾದೀತು ಎಂದು ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ನವಾಜ್ ಕಟ್ಟೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

- Advertisement -

Latest News

error: Content is protected !!