Thursday, June 4, 2026
Homeಕರಾವಳಿದಲಿತ ಯುವತಿಯ ಅತ್ಯಾಚಾರ ಖಂಡಿಸಿ ಎಸ್​ಡಿಪಿಐ ಸಂಘಟನೆಯ ಮುಖಂಡ ತಂದೆಯ ಪ್ರತಿಭಟನೆ: ಇತ್ತ ದಲಿತ ಯುವತಿಗೆ...

ದಲಿತ ಯುವತಿಯ ಅತ್ಯಾಚಾರ ಖಂಡಿಸಿ ಎಸ್​ಡಿಪಿಐ ಸಂಘಟನೆಯ ಮುಖಂಡ ತಂದೆಯ ಪ್ರತಿಭಟನೆ: ಇತ್ತ ದಲಿತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಗನ ಬಂಧನ!

- Advertisement -
- Advertisement -

ಮಂಗಳೂರು: ಹಾಥರಸ್​ನಲ್ಲಿ ನಡೆದಿದೆ ಎನ್ನಲಾದ ಗ್ಯಾಂಗ್​ರೇಪ್​ ಘಟನೆಯನ್ನು ಖಂಡಿಸಿ ಎಸ್​ಡಿಪಿಐ ಸಂಘಟನೆಯ ಮುಖಂಡನೊಬ್ಬ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಆತನ ಮಗ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ದಲಿತ ಯುವತಿಗೆ ಮದುವೆಯಾಗುವುದಾಗಿ ವಂಚಿಸಿ, ದೈಹಿಕ ಸಂಬಂಧ ಬೆಳೆಸಿದ್ದಲ್ಲದೆ ಆಕೆಯ ಭಾವಚಿತ್ರಗಳನ್ನು ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮೊಹಮ್ಮದ್ ಪೈಝಲ್ ಬಂಧಿತ ಆರೋಪಿ. ಈತ ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿ. ನಿನ್ನೆಯಷ್ಟೇ ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಪೈಝಲ್​ಗೆ ಆಂಧ್ರ​ ಮೂಲದ ಯುವತಿಯೊಬ್ಬಳು ಇನ್​ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದಳು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿ ದೈಹಿಕ ಸಂಬಂಧಕ್ಕೂ ಕಾರಣವಾಗಿತ್ತು ಎನ್ನಲಾಗಿದೆ. ಅಲ್ಲದೆ, ಯುವತಿಯ ಭಾವಚಿತ್ರಗಳನ್ನು ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ, ಕಿರುಕುಳ ನೀಡಿರುವು ಆರೋಪವೂ ಕೇಳಿಬಂದಿದೆ.

ಇನ್ನೊಂದೆಡೆ ಪೈಝಲ್​ ತಂದೆ ಅಬ್ದುಲ್ ಹಮೀದ್ ಸಾಲ್ಮರ ಎಸ್​ಡಿಪಿಐ ಸಂಘಟನೆಯ ಮುಖಂಡನಾಗಿದ್ದು, ಹಾಥರಸ್​ನಲ್ಲಿ ನಡೆದಿದೆ ಎನ್ನಲಾದ ಗ್ಯಾಂಗ್​ರೇಪ್​ ಘಟನೆಯನ್ನು ಖಂಡಿಸಿ ನಿನ್ನೆ ಪ್ರತಿಭಟನೆ ನಡೆಸುತ್ತಿದ್ದರು. ಇದರ ನಡುವೆ ಮಗನನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿಸಿರುವುದು ಪೇಚಿಗೆ ಮುಜುಗರಕ್ಕೀಡುಮಾಡಿದೆ.

- Advertisement -

Latest News

error: Content is protected !!