Thursday, June 4, 2026
Homeಕರಾವಳಿಉಡುಪಿರಾಮೇಶ್ವರಂ ಕೆಫೆ ಸ್ಫೋಟ ಕೇಂದ್ರ ಸರ್ಕಾರದ ವೈಫಲ್ಯ: ಉಡುಪಿಯಲ್ಲಿ ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು...

ರಾಮೇಶ್ವರಂ ಕೆಫೆ ಸ್ಫೋಟ ಕೇಂದ್ರ ಸರ್ಕಾರದ ವೈಫಲ್ಯ: ಉಡುಪಿಯಲ್ಲಿ ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಹೇಳಿಕೆ

- Advertisement -
- Advertisement -

ಉಡುಪಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವೈಫಲ್ಯ ಎಂದು ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಹೇಳಿದ್ದಾರೆ.

ಉಡುಪಿಯಲ್ಲಿ ಇಂದು ಹೇಳಿಕೆ ನೀಡಿರುವ ರಿಯಾಜ್, ಬಿಜೆಪಿ ನಾಯಕರು ರಾಜ್ಯ ಸರ್ಕಾರದ ಕಡೆ ಬೆರಳು ತೋರಿಸುತ್ತಿದ್ದಾರೆ, ಆದರೆ ಪುಲ್ವಾಮಾ ಮತ್ತು ಬೆಂಗಳೂರು ಸ್ಫೋಟ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.

ಬಿಜೆಪಿ ಪುಲ್ವಾಮಾ ದಾಳಿ ತನಿಖೆಯನ್ನು ನಡೆಸಿದೆಯಾ ಎಂದು ಪ್ರಶ್ನಿಸಿರುವ ರಿಯಾಜ್ ಕಡಂಬು, ಮೋದಿ ಸರ್ಕಾರವನ್ನು ವಿರೋಧಿಸಿದವರಿಗೆ ಇಡಿ ದಾಳಿ ನಡೆಯುತ್ತದೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ಪುಲ್ವಾಮಾ ದಾಳಿ ವಿಚಾರದಲ್ಲಿ ಮೋದಿ ರಾಜೀನಾಮೆ ಕೊಡಬೇಕಿತ್ತು ಎಂದಿರುವ ರಿಯಾಜ್, ಸಂಸದ ತೇಜಸ್ವಿ ಸೂರ್ಯಗೆ ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡುವ ಯಾವುದೇ ನೈತಿಕತೆ ಇಲ್ಲ ಎಂದಿದ್ದಾರೆ.

- Advertisement -

Latest News

error: Content is protected !!