Thursday, June 4, 2026
Homeತಾಜಾ ಸುದ್ದಿಮಂಗಳೂರಿನಲ್ಲಿ ಪೊಲೀಸರನ್ನು ನಿಂದಿಸಿ, ಹಲ್ಲೆಗೆ ಯತ್ನಿಸಿದ ಆರೋಪ: ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂದು ಎಸ್‌ಡಿಪಿಐ ಆರೋಪ

ಮಂಗಳೂರಿನಲ್ಲಿ ಪೊಲೀಸರನ್ನು ನಿಂದಿಸಿ, ಹಲ್ಲೆಗೆ ಯತ್ನಿಸಿದ ಆರೋಪ: ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂದು ಎಸ್‌ಡಿಪಿಐ ಆರೋಪ

- Advertisement -
- Advertisement -

ಮಂಗಳೂರು: ಅಡ್ಯಾರ್ ಕಣ್ಣೂರಿನಲ್ಲಿ ಕಳೆದ ಶುಕ್ರವಾರ ನಡೆದ ಎಸ್‌ಡಿಪಿಐ ಕಾರ್ಯಕ್ರಮದಲ್ಲಿ ಭಾಗಿಯಾದ ಕೆಲವು ಯುವಕರು ಪೊಲೀಸರನ್ನು ನಿಂದಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 12ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಪೊಲೀಸರು ಅಮಾಯಕರನ್ನು ಬಂಧಿಸುವ ಮೂಲಕ ಎಸ್‌ಡಿಪಿಐ ಪಕ್ಷವನ್ನು ಹತ್ತಿಕ್ಕಲು ಮುಂದಾಗಿದೆ ಎಂದು ಎಸ್‌ಡಿಪಿಐ ಆರೋಪಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಎಸ್‌ಡಿಪಿಐ ಸಮಾವೇಶಕ್ಕೆ ತೆರಳುವ ವೇಳೆ ಪೊಲೀಸರನ್ನು ನಿಂದಿಸಲಾಗಿದೆ ಎಂದು ಆರೋಪಿಸಿ ಸುಮಾರು 10ಕ್ಕೂ ಹೆಚ್ಚು ಅಧಿಕ ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಎಸ್‌ಡಿಪಿಐ ಕಾರ್ಯಕರ್ತರಲ್ಲದೆ ಇತರ ಅಮಾಯಕರೂ ಇದ್ದಾರೆ ಎಂದಿದ್ದಾರೆ.

- Advertisement -

Latest News

error: Content is protected !!