- Advertisement -
- Advertisement -
ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದರ ಭಾಗವಾಗಿ ಬೆಳ್ತಂಗಡಿ ತಾಲೂಕಿನ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆಯಿತು.
ಲಾಯಿಲಾ ಜಂಕ್ಷನ್ ನಲ್ಲಿ ನಡೆದ ಪ್ರತಿಭಟನೆಯ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಲಾಯಿಲ ಗ್ರಾಮ ಸಮಿತಿ ಅಧ್ಯಕ್ಷ ರಿಯಾಸ್ ವಹಿಸಿದರು. ಹಾಗು ಪಕ್ಷದ ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಹೈದರ್ ನೀರ್ಸಾಲ್ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಇನ್ನು ಕುವೆಟ್ಟು ಗ್ರಾಮ ಸಮಿತಿ ವತಿಯಿಂದ ಗುರುವಾಯನಕೆರೆ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಅಧ್ಯಕ್ಷ ದಾವೂದ್ ಜಿ. ಕೆ ವಹಿಸಿದ್ದರು ಹಾಗೂ ಬೆಳ್ತಂಗಡಿ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಈ ಸಮಯದಲ್ಲಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -