Wednesday, August 5, 2026
Homeಕರಾವಳಿಮಂಗಳೂರುಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಸಮಸ್ಯೆಗಳ ಪರಿಹಾರಕ್ಕೆ ಆರೋಗ್ಯ ಸಚಿವರಿಗೆ ಎಸ್‌ಡಿಪಿಐ ಮನವಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಸಮಸ್ಯೆಗಳ ಪರಿಹಾರಕ್ಕೆ ಆರೋಗ್ಯ ಸಚಿವರಿಗೆ ಎಸ್‌ಡಿಪಿಐ ಮನವಿ

- Advertisement -
- Advertisement -

ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರು ಹಾಗೂ ಮಾಜಿ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರಿಗೆ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ನೇತೃತ್ವದಲ್ಲಿ ಆಸ್ಪತ್ರೆಯ ವಿವಿಧ ಸಮಸ್ಯೆಗಳ ಕುರಿತು ಆ
5 ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಮನವಿ ಪತ್ರ ಸಲ್ಲಿಸಿದರು.

ಮನವಿಯಲ್ಲಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿಗಳ ಕೊರತೆ, ರಕ್ತ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಕಿಟ್‌ಗಳ ಅಭಾವ, ಹೊರರೋಗಿಗಳು ಹಾಗೂ ಹಿರಿಯ ನಾಗರಿಕರಿಗೆ ಸಮರ್ಪಕ ಆಸನ ವ್ಯವಸ್ಥೆಯ ಕೊರತೆ, ರೇಡಿಯಾಲಜಿ (ಸ್ಕ್ಯಾನಿಂಗ್) ಸೇವೆಯ ಅಲಭ್ಯತೆ, ಆಡಳಿತಾತ್ಮಕ ಸಮನ್ವಯದ ಕೊರತೆ ಸೇರಿದಂತೆ ಹಲವು ಸಮಸ್ಯೆಗಳನ್ನು ವಿವರಿಸಿ, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.

ಅಲ್ಲದೆ, ಆಸ್ಪತ್ರೆಯಲ್ಲಿ ಅಗತ್ಯ ಸಿಬ್ಬಂದಿ ನೇಮಕ, ಔಷಧಿ ಹಾಗೂ ವೈದ್ಯಕೀಯ ಉಪಕರಣಗಳ ಸಮರ್ಪಕ ಲಭ್ಯತೆ ಕಲ್ಪಿಸುವುದು, ಸ್ಕ್ಯಾನಿಂಗ್ ಸೇರಿದಂತೆ ಅಗತ್ಯ ಸೇವೆಗಳನ್ನು ಪುನರಾರಂಭಿಸುವುದು ಹಾಗೂ ಆಸ್ಪತ್ರೆಯ ಆಡಳಿತ ವ್ಯವಸ್ಥೆಯನ್ನು ಸುಧಾರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.ಮನವಿ ಸ್ವೀಕರಿಸಿದ ಯು.ಟಿ. ಖಾದರ್ ಅವರು ಆಸ್ಪತ್ರೆಯ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಪಕ್ಷದರಿಗಳಿಂದ ವರದಿ ಪಡೆದು, ಸಾರ್ವಜನಿಕರ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನಮಾಝ್ ಶರೀಫ್ ಕಟ್ಟೆ, ಕ್ಷೇತ್ರ ಮುಖಂಡರಾದ ಸಾಲಿ ಮದ್ದಡ್ಕ, ಅಶ್ರಫ್ ಕಟ್ಟೆ, ಫಝಲ್ ಉಜಿರೆ, ಸಲೀಂ ಲಾಯಿಲಾ, ಉಪಸ್ಥಿತರಿದ್ದರು.

- Advertisement -

Latest News

error: Content is protected !!