Sunday, June 7, 2026
Homeಕರಾವಳಿಎರಡನೇ ಹಂತದ ಕರಾವಳಿ ಪ್ರಜಾಧ್ವನಿ ಯಾತ್ರೆಗೆ ಮಂಗಳೂರಿನಲ್ಲಿ ಇಂದು ಚಾಲನೆ

ಎರಡನೇ ಹಂತದ ಕರಾವಳಿ ಪ್ರಜಾಧ್ವನಿ ಯಾತ್ರೆಗೆ ಮಂಗಳೂರಿನಲ್ಲಿ ಇಂದು ಚಾಲನೆ

- Advertisement -
- Advertisement -

ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಎರಡನೇ ಹಂತದ ಕರಾವಳಿ ಪ್ರಜಾಧ್ವನಿ ಯಾತ್ರೆಗೆ ಚಾಲನೆ ಇಂದು ಮಂಗಳೂರಿನಲ್ಲಿ ಚಾಲನೆ ನೀಡಲಾಗಿದೆ.

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮಂಗಳೂರು ಹೊರವಲಯದ ಕೈಕಂಬ ಬಳಿಯ ಖಾಸಗಿ ಸಭಾಂಗಣದಲ್ಲಿ ಕರಾವಳಿ ಪ್ರಜಾಧ್ವನಿ ಸಮಾವೇಶ ನಡೆಯಿತು‌.

ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿ ಪ್ರಸಾದ್ ನೇತೃತ್ವದಲ್ಲಿ ಕರಾವಳಿ ಪ್ರಜಾಧ್ವನಿ ಸಮಾವೇಶ ಅಯೋಜಿಸಲಾಗಿದ್ದು, ವಿಧಾನ ಪರಿಷತ್ ಸದಸ್ಯರಾದ ಕೆ.‌ ಹರೀಶ್ ಕುಮಾರ್, ಮಂಜುನಾಥ ಭಂಡಾರಿ ಮತ್ತು ಮಾಜಿ ಶಾಸಕ ಮೊಯಿದ್ದೀನ್ ಬಾವಾ ಭಾಗಿಯಾಗಿದ್ದರು.

ಸಮಾವೇಶದಲ್ಲಿ ನೂರಕ್ಕೂ ಹೆಚ್ಚು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.

- Advertisement -

Latest News

error: Content is protected !!