Monday, May 6, 2024
Homeಕರಾವಳಿಸಂತ ಮೇರಿ ಮಹಾವಿದ್ಯಾಲಯದಲ್ಲಿ ಎರಡನೇ ಡೋಸ್ ಲಸಿಕಾ ಅಭಿಯಾನ

ಸಂತ ಮೇರಿ ಮಹಾವಿದ್ಯಾಲಯದಲ್ಲಿ ಎರಡನೇ ಡೋಸ್ ಲಸಿಕಾ ಅಭಿಯಾನ

spot_img
- Advertisement -
- Advertisement -

ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್‍ಸಿಸಿ, ಎನ್‍ಎಸ್‍ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಎರಡನೇ ಡೋಸ್ ಲಸಿಕಾ ಅಭಿಯಾನವನ್ನು ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ, ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಸೆಪ್ಟೆಂಬರ್ 21ರಿಂದ ಆಯೋಜಿಸಲಾಯಿತು.

ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗೆ ಕೋವಿಡ್ -19 ಲಸಿಕಾಕರಣ ನಡೆಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಕಾಲೇಜಿನ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರಥಮ ಡೋಸ್ ಪಡೆದ ಅರ್ಹ ಫಲಾನುಭವಿಗಳಿಗೆ ಲಸಿಕೆಗಳ ಲಭ್ಯತೆಗೆ ಅನುಸಾರವಾಗಿ ಕಾಲೇಜು ಆವರಣದಲ್ಲಿಯೇ ಲಸಿಕಾಕರಣ ಅಭಿಯಾನ ಆಯೋಜಿಸಲಾಯಿತು. ಕಾಲೇಜು ಆಡಳಿತ ವ್ಯವಸ್ಥೆಯ ಸಹಕಾರದಿಂದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಪಾಲಿಸಿಕೊಂಡು ಲಸಿಕೆ ವಿತರಿಸಲಾಗುತ್ತಿದೆ ಎಂದು ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಸಂದರ್ಭೋಚಿತವಾಗಿ ಮಾತನಾಡಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶಿರ್ವ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಗಾಯತ್ರಿ ರವರು ಜಿಲ್ಲಾಡಳಿತದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಮಾಡಲಾಗುತ್ತಿದ್ದು ಕಾಲೇಜುಗಳ ಮೂಲಕ ಲಸಿಕೆ ನೀಡಲಾಗುತ್ತಿದೆ, ಲಸಿಕೆ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದೆ ಎಂಬ ಮಾಹಿತಿಯನ್ನು ನೀಡಿದರು.     

ಈ ಕಾರ್ಯಕ್ರಮದಲ್ಲಿ ಬೋಧಕ,ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದಿದ್ದಾರೆ. ಈ ಅಭಿಯಾನಕ್ಕೆ ಸಹಕಾರವನ್ನು ನೀಡಿದ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾದ , ಕಲ್ಪನಾ, ಶಶಿ , ಗೀತಾ, ಸಂಜಯ್, ಲ್ಯಾಪ್ ಟೆಕ್ನಿಷಿಯನ್ ಶೃತಿ, ಕಿರಣ್, ಡೇಟಾ ಎಂಟ್ರಿ ಆಪರೇಟರ್ ವಿದ್ಯಾ ಮಹೇಶ್ ಹಾಗೂ ಆಶಾ ಕಾರ್ಯಕರ್ತರಾದ ಸವಿತಾ,ರೆಹೆಮತ್‍ವರು ನೆರವೇರಿಸಿ ಕೊಟ್ಟರು.

- Advertisement -
spot_img

Latest News

error: Content is protected !!