Wednesday, May 15, 2024
Homeತಾಜಾ ಸುದ್ದಿನಾಳೆ  ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ನಾಳೆ  ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ಏಪ್ರಿಲ್ 21ಅಂದ್ರೆ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ.ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023ರಿಂದ 29-03-2023ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 21-04-2023ರಂದು ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 21-04-2023ರಂದು ಬೆಳಿಗ್ಗೆ 11 ಗಂಟೆಯ ನಂತ್ರ ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!