Monday, May 6, 2024
Homeಕರಾವಳಿಮಾರ್ಚ್ 1ರಿಂದ ಮಾ.22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ; 200 ಮೀಟ‌ರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ

ಮಾರ್ಚ್ 1ರಿಂದ ಮಾ.22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ; 200 ಮೀಟ‌ರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ

spot_img
- Advertisement -
- Advertisement -

ಮಂಗಳೂರು: ಮಾರ್ಚ್ 1ರಿಂದ ಮಾ.22ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಘಟಕ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಯುಕ್ತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟ‌ರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ.

ಇನ್ನು ನಿಷೇಧಿತ ವಲಯದಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದು, ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಝರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವಂತಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!