Thursday, May 2, 2024
Homeತಾಜಾ ಸುದ್ದಿದ್ವಿತೀಯ ಪಿಯುಸಿ ಪರೀಕ್ಷೆ; ಭೌತಶಾಸ್ತ್ರ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗುತ್ತಿದೆ ಎಂಬುದು ಸುಳ್ಳು

ದ್ವಿತೀಯ ಪಿಯುಸಿ ಪರೀಕ್ಷೆ; ಭೌತಶಾಸ್ತ್ರ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗುತ್ತಿದೆ ಎಂಬುದು ಸುಳ್ಳು

spot_img
- Advertisement -
- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಚ್ 7ರಂದು ಭೌತಶಾಸ್ತ್ರ ವಿಷಯದಲ್ಲಿ ಪರೀಕ್ಷೆ ನಡೆದಿದ್ದು, ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡುತ್ತಿದೆ ಎಂಬ ವದಂತಿ ಎಲ್ಲೆಡೆ ಹರಡಿತ್ತು. ಆದರೆ ಇದೀಗ ಪಿಯು ಮಂಡಳಿ ಈ ಕುರಿತು ಸ್ಪಷ್ಟನೆ ನೀಡಿದೆ.

ಪಿಯುಸಿ ಪರೀಕ್ಷೆಗಳ ನಿರ್ದೇಶಕ ಗೋಪಾಲಕೃಷ್ಣ ಎಚ್.ಎನ್ ಈ ಕುರಿತು, ‘ವಿದ್ಯಾರ್ಥಿಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಕಷ್ಟಕರವಾಗಿದ್ದರಿಂದ ಗ್ರೇಸ್ ಮಾರ್ಕ್ಸ್ ನೀಡಲಾಗುತ್ತಿದೆ ಎಂಬುದು ಸುಳ್ಳು. ಇದು ಕೇವಲ ವದಂತಿ. ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲ. ಮಾರ್ಚ್ 10 ರಂದು ಹೊರಡಿಸಿದ್ದ ಸುತ್ತೋಲೆ ನಕಲಿ ಎಂದು ಮಂಡಳಿಯು ಸ್ಪಷ್ಟನೆ ನೀಡಿದೆ. ಮಂಡಳಿಯು ಇದುವರೆಗೆ ಯಾವುದುದೇ ಗ್ರೇಸ್ ಅಂಕ ನೀಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಇದು ನಕಲಿ ಸುತ್ತೋಲೆಯಾಗಿದೆ,’ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!