Thursday, May 16, 2024
Homeತಾಜಾ ಸುದ್ದಿದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟ

spot_img
- Advertisement -
- Advertisement -

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ಏಪ್ರಿಲ್ 22 ರಿಂದ ಮೇ 18 ರವರೆಗೆ ಪರೀಕ್ಷಾ ದಿನಾಂಕ ನಿಗದಿಯಾಗಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಏಪ್ರಿಲ್ 22 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, 23 ರಂದು ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ, 25 ರಂದು ಅರ್ಥಶಾಸ್ತ್ರ, 26 ರಂದು ಹಿಂದೂಸ್ತಾನಿ ಸಂಗೀತ, ಮನ:ಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ, 27 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, 28 ರಂದು ಕನ್ನಡ, ಅರೇಬಿಕ್ ಪರೀಕ್ಷೆಗಳು ನಡೆಯಲಿವೆ.

ಮೇ 2 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ, 4 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್, 5 ರಂದು ಇಂಗ್ಲಿಷ್,10 ರಂದು ಇತಿಹಾಸ, ಭೌತಶಾಸ್ತ್ರ, 12 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, 14 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, 17 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂ ಗರ್ಭ ಶಾಸ್ತ್ರ, ಗೃಹ ವಿಜ್ಞಾನ ಮತ್ತು 18 ರಂದು ಹಿಂದಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷಾ ಅವಧಿ ನಿಗದಿಪಡಿಸಲಾಗಿದೆ.

- Advertisement -
spot_img

Latest News

error: Content is protected !!