Saturday, April 27, 2024
Homeತಾಜಾ ಸುದ್ದಿಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಅದೇಶ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಅದೇಶ

spot_img
- Advertisement -
- Advertisement -

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.

ರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿದ್ದ ವೇಳೆ ಕೇಳಿಬಂದಿದ್ದ 4 ಪ್ರಕರಣಗಳ
ಸತ್ಯಾಸತ್ಯತೆ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ.

ತನಿಖಾಧಿಕಾರಿಯಾಗಿ ಬಿಡಬ್ಲ್ಯೂ ಎಸ್ ಎಸ್ ಬಿ ಅಧ್ಯಕ್ಷ ಎ‌ನ್. ಜಯರಾಮ್ ಅವರನ್ನು ನೇಮಕ ಮಾಡಿದ್ದು, 30 ದಿನಗಳ‌ ಒಳಗೆ ವರದಿ‌ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಪರಿಸರಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅವ್ಯವಹಾರ ಆರೋಪ, ಡಿಸಿ ನಿವಾಸದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಅನಧಿಕೃತ ಈಜುಕೊಳ ಮತ್ತು ಜಿಮ್ ನಿರ್ಮಾಣ, ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ ಮುಚ್ಚಿಟ್ಟಿರುವುದು ಮತ್ತು ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ಕಾರಣವಾದ ನಿರ್ಲಕ್ಷ್ಯ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಸಿಂಧೂರಿ ವಿರುದ್ಧ ಕೆ.ಆರ್. ನಗರ ಶಾಸಕ ಸಾ.ರಾ. ಮಹೇಶ್ ಮತ್ತು ಮೈಸೂರು ಮಹಾನಗರ ಪಾಲಿಕೆ ಮಾಜಿ ಡೆಪ್ಯುಟಿ ಮೇಯರ್ ಶೈಲೇಂದ್ರ ಭೀಮ್ ರಾವ್ ಆರೋಪ ಮಾಡಿದ್ದರು.

ಸಾ.ರಾ. ಮಹೇಶ್ ಮತ್ತು ಶೈಲೇಂದ್ರ ಭೀಮ್ ರಾವ್ ಪತ್ರದ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆಗೆ ಆದೇಶ ಹೊರಡಿಸಲಾಗಿದೆ.

ರೋಹಿಣಿ ಸಿಂಧೂರಿ ಹಾಲಿ ಧಾರ್ಮಿಕ ಮತ್ತು ದತ್ತಿ‌ ಇಲಾಖೆ ಆಯುಕ್ತರಾಗಿದ್ದಾರೆ.

- Advertisement -
spot_img

Latest News

error: Content is protected !!