ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜು.20ರ ಮಂಗಳವಾರ ಪ್ರಕಟಿಸಲಾಗುವುದು ಹಾಗೂ ಪ್ರತಿ ವರ್ಷದಂತೆ ಅಂಕ ಆಧಾರಿತ ಫಲಿತಾಂಶವನ್ನೇ ನೀಡಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾದ ಸ್ನೇಹಲ್ ತಿಳಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯದ ಕಾರಣ ವಿದ್ಯಾರ್ಥಿಗಳ ಬಳಿ ಪರೀಕ್ಷಾ ನೋಂದಣಿ ಸಂಖ್ಯೆ ಇಲ್ಲ. ಹೀಗಾಗಿ ಪ್ರತಿ ವಿದ್ಯಾರ್ಥಿಗೂ ಪ್ರತ್ಯೇಕ ನೋಂದಣಿ ಸಂಖ್ಯೆ ಸೃಷ್ಟಿಸಿದ್ದು, ಅದನ್ನು ಇಲಾಖಾ ವೆಬ್ ಸೈಟ್ ಮೂಲಕವೇ ಪಡೆಯಲು ಜುಲೈ 16 ರಿಂದ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳು ಇಲಾಖೆ ವೆಬ್ ಸೈಟ್ ನಲ್ಲಿ know my registration number ಎಂಬ ಲಿಂಕ್ ಅನ್ನು ನೀಡಿ ಅದರ ಮೂಲಕ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಪಡೆದುಕೊಳ್ಳಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಈ ಸಂಬಂಧ ವಿದ್ಯಾರ್ಥಿಗಳ ಮೊಬೈಲ್, ಇ-ಮೇಲ್‌ಗೆ ಕೂಡ ಲಿಂಕ್ ಅನ್ನು ಕಳಿಸಲಾಗುವುದು ಎಂದು ನಿರ್ದೇಶಕರು ತಿಳಿಸಿದ್ದಾರೆ.
ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ !!
- Advertisement -
- Advertisement -
- Advertisement -

