Sunday, May 19, 2024
Homeತಾಜಾ ಸುದ್ದಿದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ, ಉಡುಪಿ ಮೊದಲ ಸ್ಥಾನ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ, ಉಡುಪಿ ಮೊದಲ ಸ್ಥಾನ

spot_img
- Advertisement -
- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.69.20 ಫಲಿತಾಂಶ ದಾಖಲಾಗಿದೆ.

ಈ ವರ್ಷದ ಒಟ್ಟು 5.95 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿದ್ದಾರೆ. ಏಪ್ರಿಲ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಬಾಕಿ ಉಳಿದಿದ್ದ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಜೂನ್‌ನಲ್ಲಿ ನಡೆಸಲಾಗಿತ್ತು.

ಈ ಪೈಕಿ ಹೊಸಬರು 5,56267 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 3,84,947 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪುನಾರಾವರ್ತಿತ 91,025 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 25,602 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಶೇ. 76.02 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ,65.52 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾವಿಭಾಗದಲ್ಲಿ ಶೇ. 41.27 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಜಿಲ್ಲಾವಾರು ಫಲಿತಾಂಶ:

ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಒಂದೇ ರೀತಿಯ ಫಲಿತಾಂಶದೊಂದಿಗೆ ಈ ಎರಡು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ. ವಿಜಯಪುರ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.

ನಂತರದ ಸ್ಥಾನವನ್ನು ಕ್ರಮವಾಗಿ ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳು ಪಡೆದುಕೊಂಡಿದೆ.

- Advertisement -
spot_img

Latest News

error: Content is protected !!