- Advertisement -
![]()
- Advertisement -
ಮೂಡುಬಿದಿರೆಯ ಕಡೆಪಲ್ಲದ ಗಾಂಧಿನಗರದಲ್ಲಿರುವ ‘ರಾಯಲ್ ಪ್ಯಾರಡೈಸ್’ ಕಟ್ಟಡದ ನಾಲ್ಕನೇ ಮಹಡಿಗೆ ಶೀಟು ಹಾಕುತ್ತಿದ್ದ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶೌರ್ಯ ಆಚಾರ್ಯ ಎಂಬ ಯುವಕ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತ ಯುವಕ ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ ಸಂತೋಷ್ ಆಚಾಯ೯ ಅವರ ಪುತ್ರನಾಗಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಕಾಲೇಜು ರಜೆಯಿದ್ದ ಕಾರಣ ಕಾರ್ಮಿಕನಾಗಿ ಕೆಲಸಕ್ಕೆ ತೆರಳಿದ್ದ ಎನ್ನಲಾಗಿದೆ.
ಘಟನೆ ನಡೆದ ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ಕಟ್ಟಡದ ಗುತ್ತಿಗೆದಾರ ಪ್ರವೀಣ್ ಹಾಗೂ ಮಾಲೀಕ ನೋರ್ಟ್ ಶಾಬಾ ರೇಗೋ ಅವರು ಕೆಲಸದ ಅವಧಿಯಲ್ಲಿ ಕಾರ್ಮಿಕರಿಗೆ ಸರಿಯಾದ ಸುರಕ್ಷತಾ ಸಾಮಗ್ರಿಗಳನ್ನು ನೀಡದಿರುವುದೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


