- Advertisement -
![]()
- Advertisement -
ಉಡುಪಿ: ಏಣಿಯಿಂದ ಆಯತಪ್ಪಿ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೆಬ್ರಿಯ ಹುತುರ್ಕೆ ಎಂಬಲ್ಲಿ ನಡೆದಿದೆ. ಹೆಬ್ರಿ ತಾಲೂಕಿನ ಬೇಳಂಜೆ ನಿವಾಸಿ ಸಾತ್ವಿಕ್ ಮೃತರು.
ಸಾತ್ವಿಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ರಜೆಯಲ್ಲಿ ತನ್ನ ವಿದ್ಯಾಭ್ಯಾಸಕ್ಕೂ, ಮನೆಯ ಖರ್ಚಿಗೂ ಸಹಾಯವಾಗಲಿ ಎಂಬ ಉದ್ದೇಶದಿಂದ ಕೆಲಸಕ್ಕೆ ಹೋಗಿದ್ದರು. ಆದರೆ ಹೆಬ್ರಿ ಹುತುರ್ಕೆ ಎಂಬಲ್ಲಿ ಕೆಲಸ ಮಾಡುವಾಗ ಏಣಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


