Saturday, May 18, 2024
Homeಕರಾವಳಿಇಂದು ಸಂಜೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆವರೆಗೂ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ...

ಇಂದು ಸಂಜೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆವರೆಗೂ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ…

spot_img
- Advertisement -
- Advertisement -

ಮಂಗಳೂರು:  ಮಂಗಳೂರು ನಗರದಾದ್ಯಂತ ಇಂದು ಸಂಜೆ 6 ರಿಂದ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್‌ ಆಯುಕ್ತ ವಿಕಾಸ್‌ ಕುಮಾರ್‌ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.


ಇನ್ನು ಹೊಸ ವರ್ಷಾಚರಣೆಯ ನೆಪದಲ್ಲಿ ಐದಕ್ಕಿಂದ ಹೆಚ್ಚು ಜನ ಸೇರುವುದು, ಸಾರ್ವಜನಿಕ ಸ್ಥಳ, ರಸ್ತೆ, ಬೀಚ್‌‌ ಹಾಗೂ ಮೈದಾನಗಳಲ್ಲಿ ಹೊಸ ವರ್ಷಾಚರಣೆ, ಜನ ಸೇರಿಸಿ ಹೊಸ ವರ್ಷ ಆಚರಣೆ ಮಾಡುವುದಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ವಸತಿ ಸಮುಚ್ಚಯ, ಖಾಸಗಿ ಕ್ಲಬ್‌‌ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ. ಹೊಟೇಲ್‌‌, ಬಾರ್‌, ಪಬ್‌, ಮಾಲ್‌ಗಳಲ್ಲಿ ಡಿಜೆ, ಮ್ಯೂಸಿಕಲ್‌‌ ನೈಟ್‌ಗಳಿಗೆ ಅನುಮತಿ ಇಲ್ಲ. ಇವುಗಳಲ್ಲಿ ಪ್ರತಿನಿತ್ಯದ ವ್ಯವಹಾರಕಷ್ಟೇ ಅನುಮತಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ನಡುವೆ ಈಗಾಗಲೇ ಹೊಸವರ್ಷ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‍ಗಳಿಗೆ ಎಲ್ಲಾ ಕಡಲ ಕಿನಾರೆಗಳಿಗೆ ಡಿಸೆಂಬರ್ 31 ರಂದು ಮಧ್ಯಾಹ್ನ 12 ಗಂಟೆಯಿಂದ ಜನವರಿ 2 ರಂದು ಮಧ್ಯಾಹ್ನ 12 ಗಂಟೆಯವರೆಗೆ ಸ್ಥಳೀಯ ಹಾಗೂ ಸಾಂಪ್ರದಾಯಿಕ ಮೀನುಗಾರರನ್ನು ಹೊರತು ಪಡಿಸಿ ಇತರೇ ಯಾವುದೇ ಪ್ರವಾಸಿಗರು ಹಾಗೂ ಸಾರ್ವಜನಿಕರು ಪ್ರವೇಶಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!