Wednesday, May 15, 2024
Homeತಾಜಾ ಸುದ್ದಿ ಭಜರಂಗದಳದ ಕಾರ್ಯಕರ್ತನ ಕೊಲೆ ಪ್ರಕರಣ ಶಿವಮೊಗದಲ್ಲಿ ಉದ್ವಿಗ್ನ ಪರಿಸ್ಥಿತಿ: ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

 ಭಜರಂಗದಳದ ಕಾರ್ಯಕರ್ತನ ಕೊಲೆ ಪ್ರಕರಣ ಶಿವಮೊಗದಲ್ಲಿ ಉದ್ವಿಗ್ನ ಪರಿಸ್ಥಿತಿ: ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

spot_img
- Advertisement -
- Advertisement -

ಶಿವಮೊಗ್ಗ:  ದುಷ್ಕರ್ಮಿಗಳಿಂದ ಕೊಲೆಯಾದ ಭಜರಂಗ ದಳದ ಕಾರ್ಯಕರ್ತ ಹರ್ಷ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ, ಕುಟುಂಬಸ್ಥರಿಗೆ ದೇಹವನ್ನು ಹಸ್ತಾಂತರಿಸಿದ ನಂತರ ಪಾರ್ಥೀವ ಶರೀರದ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಸಿಕ್ಕ ಸಿಕ್ಕ ಸ್ಥಳಗಳಲ್ಲಿ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.

ಬೈಕ್ ಗಳಿಗೆ ಬೆಂಕಿ ಹಚ್ಚಿ, ಕಾರುಗಳ ಗ್ಲಾಸ್ ಗಳನ್ನು ಪುಡಿ ಪುಡಿ ಮಾಡಿರೋ ಘಟನೆ ಕೂಡ ನಡೆದಿದೆ. ಹೀಗಾಗಿ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನತೆಯನ್ನು ತಲುಪಿದೆ ಎನ್ನಲಾಗಿದೆ. ಈ ನಡುವೆ ಪೋಲಿಸರ ಮುಂದೆಯೇ ಕತ್ತಿ,ಮಚ್ಚು, ಲಾಂಗ್‌ ಹಿಡಿದ ಜನತೆ ಹಿಡಿದು ನಿಂತಿರುವುದು ಆತಂಕಕ್ಕೆ ಕಾರಣವಾಗಿದ್ದು, ಈ ನಡುವೆ ಗಲಾಟೆಯಲ್ಲಿ ಓರ್ವ ಮಹಿಳೆಗೆ ಗಾಯವಾಗಿದೆ ಎನ್ನಲಾಗಿದೆ.

ಮೆಗ್ಗಾನ್ ಆಸ್ಪತ್ರೆಯಿಂದ ಹರ್ಷ ಮನೆ ಇರುವಂತ ಬಸವನ ಬೀದಿಯವರೆಗೆ ಮೆರವಣಿಗೆಯಲ್ಲಿ ಮೃತದೇಹವನ್ನು ಕೊಂಡೊಯ್ಯಲಾಗುತ್ತಿತ್ತು. ಮೆರವಣಿಗೆ ವೇಳೆಯಲ್ಲಿ ಎನ್ ಟಿ ರಸ್ತೆಯಲ್ಲಿ ಸಿಕ್ಕ ಸಿಕ್ಕ ಮನೆಗಳು, ವಾಹನಗಳ ಮೇಲೆ ರೊಚ್ಚಿಗೆದ್ದಂತ ವಿವಿಧ ಗುಂಪುಗಳು ಕಲ್ಲು ತೂರಾಟ ನಡೆಸಿರೋದಾಗಿ ತಿಳಿದು ಬಂದಿದೆ. ಇದಷ್ಟೇ ಅಲ್ಲದೇ ಉದ್ರಿಕ್ತ ಗುಂಪುಗಳಿಂದ ಬೈಕ್ ಗಳಿಗೆ ಬೆಂಕಿ ಕೂಡ ಹಚ್ಚಿದ್ದಾರೆ ಎನ್ನಲಾಗಿದೆ. ಜೊತೆಗೆ ಮೆರವಣಿಗೆ ಸಾಗುತ್ತಿದ್ದಂತ ರಸ್ತೆಗಳಲ್ಲಿ ನಿಲ್ಲಿಸಿದ್ದಂತ ಕಾರುಗಳ ಗ್ಲಾಸ್ ಗಳನ್ನು ಪುಡಿ ಪುಡಿ ಮಾಡಿದ್ದಾರೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ವ ಆರೋಪಿ, ಬೆಂಗಳೂರಿನ ಜೆಜೆ ನಗರದಲ್ಲಿ ಮೂವರು ಆರೋಪಿ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!