Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ; ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್...

ಬೆಳ್ತಂಗಡಿ : ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ; ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

- Advertisement -
- Advertisement -

ಬೆಳ್ತಂಗಡಿ : ರಸ್ತೆಗೆ ಬಂದ ಕಾಡಾನೆ ಜೊತೆ ಸೆಲ್ಫಿ ಫೋಟೋ ತೆಗೆಯುವ ಸಾಹಸಕ್ಕೆ ಕೈ ಹಾಕಿದ ವಾಹನ ಸವಾರರಿಗೆ ಅರಣ್ಯ ಸಚಿವರು ಬಿಸಿ ಮುಟ್ಟಿಸುವ ಕೆಲಸ ಮಾಡಲು ಮುಂದಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ 4 ನೇ ತಿರುವಿನಲ್ಲಿ ಮೇ.22 ರಂದು ಬೆಳಗ್ಗೆ ರಸ್ತೆಗೆ ಬಂದಿದ್ದ ಕಾಡನೆ ಜೊತೆ ವಾಹನ ಸವಾರರು ಇಳಿಸು ಸೆಲ್ಫಿ ಫೋಟೋ ತೆಗೆಯುತ್ತಿದ್ದ ಬಗ್ಗೆ ವಿಡಿಯೋ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ವಾಹನ ನಂಬರ್ ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಮತ್ತು ಅರಣ್ಯದ ಪ್ರವೇಶದ ಬಳಿ ಎಚ್ಚರಿಕೆ ಫಲಕ ಹಾಕಿ ಅರಿವು ಮೂಡಿಸಲು ಸಂಬಂಧ ಸ್ಪಷ್ಟ ಆದೇಶ ಹೊರಡಿಸಲು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖಸ್ಥರಿಗೆ ಸೂಚನಾ ಪತ್ರ ಮೇ.22 ರಂದು ಸಂಜೆ ಹೊರಡಿಸಿದ್ದಾರೆ.ಅರಣ್ಯ ಸಚಿವರ ಸೂಚನಾ ಪತ್ರದ ಪ್ರತಿ ಮಹಾಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ಲಭ್ಯವಾಗಿದೆ.

- Advertisement -

Latest News

error: Content is protected !!