Friday, May 3, 2024
Homeತಾಜಾ ಸುದ್ದಿಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ವಿಧಿವಶ

ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ವಿಧಿವಶ

spot_img
- Advertisement -
- Advertisement -

ನವದೆಹಲಿ: ರಾಜ್ಯ ಸಭಾ ಸದಸ್ಯ, ಕಾಂಗ್ರೆಸ್‍ನ ಹಿರಿಯ ನಾಯಕ ಅಹ್ಮದ್ ಪಟೇಲ್ ಇಂದು ನಿಧನರಾಗಿದ್ದಾರೆ.ಅವರಿಗೆ 71 ವರ್ಷ ವಯಸ್ಸಾಗಿತ್ತು.

ಅಹ್ಮದ್ ಪಟೇಲ್ ಅವರಿಗೆ ಕೆಲ ವಾರಗಳ ಹಿಂದಷ್ಟೇ ಕೊರೊನಾ ಕಾಣಿಸಿಕೊಂಡಿತ್ತು. ಹಾಗಾಗಿ ಗುರುಗ್ರಾಮದ ಮೆಡಂತಾ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮುನ್ನ ಫರಿದಾಬಾದ್‍ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ಹೀಗಾಗಿ ಮೆಡಂತಾ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

ಇನ್ನು ತಮಗೆ ಕೊರೊನಾ ಸೋಂಕು ತಗುಲಿದ ಕುರಿತು ಅಕ್ಟೋಬರ್ 1ರಂದು ಸ್ವತಃ ಅಹ್ಮದ್ ಪಟೇಲ್ ಅವರೇ ಖಚಿತಪಡಿಸಿದ್ದರು. ಅಲ್ಲದೆ ಹೋಮ್ ಐಸೋಲೇಟ್ ಆಗುತ್ತಿರುವುದಾಗಿ ಮಾಹಿತಿ ನೀಡಿದ್ದರು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಫರಿದಾಬಾದ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೂ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮೆಡಂತಾ ಆಸ್ಪತ್ರೆಗೆ ದಾಖಲಾಗಿದ್ದರು.

71 ವರ್ಷದ ಅಹ್ಮದ್ ಪಟೇಲ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಾಂಗ್ರೆಸ್ ಖಜಾಂಚಿಯಾಗಿದ್ದ ಅವರು , ಕಾಂಗ್ರೆಸ್‍ನ ಹಿರಿಯ ನಾಯಕರು ಮತ್ತು ಸೋನಿಯಾ ಗಾಂಧಿ ಕುಟುಂಬದ ಆಪ್ತರು. ಆಸ್ಪತ್ರೆಗೆ ದಾಖಲಾದಾಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಸಂಸದ ಶಶಿ ತರೂರ್ ಟ್ವೀಟ್ ಮಾಡಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದರು.

ಅಂದ್ಹಾಗೆ, ಅಹ್ಮದ್ ಪಟೇಲ್ ಆರೋಗ್ಯ ಸ್ಥಿತಿಗತಿ ಕುರಿತು ಭಾನುವಾರ ಹೇಳಿಕೆ ನೀಡಿದ್ದ, ಮಗ ಫೈಸಲ್ ಅವರು, ನನ್ನ ತಂದೆಯ ಆರೋಗ್ಯ ಸ್ಥಿರವಾಗಿದೆ. ಆದರೆ ವೈದ್ಯಕೀಯ ನಿಗಾದಲ್ಲಿ ಮುಂದುವರಿಯಲಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ಅವರು ಬೇಗನೆ ಗುಣಮುಖರಾಗಲೆಂದು ಪ್ರಾರ್ಥಿಸಿ ಎಂದು ಮನವಿ ಮಾಡುತ್ತೇನೆ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ ಫೈಸಲ್ ಮನವಿ ಮಾಡಿಕೊಂಡಿದ್ದರು. ಆದರೆ ಇಂದು ಅಹ್ಮದ್ ಪಟೇಲ್ ನಿಧನರಾಗಿದ್ದಾರೆ. ಇನ್ನು ಪಟೇಲ್ ನಿಧನಕ್ಕೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!