Wednesday, July 15, 2026
Homeಕರಾವಳಿಹಿರಿಯ ಕಾಂಗ್ರೆಸ್ ಮುಖಂಡ ಇ. ಸುಂದರ ಗೌಡ ಅಸ್ತಂಗತ

ಹಿರಿಯ ಕಾಂಗ್ರೆಸ್ ಮುಖಂಡ ಇ. ಸುಂದರ ಗೌಡ ಅಸ್ತಂಗತ

- Advertisement -
- Advertisement -

ಬೆಳ್ತಂಗಡಿ; ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಉಜಿರೆ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ಅವರು ತಮ್ಮ 78ನೇ ವಯಸ್ಸಿನಲ್ಲಿ ಅಲ್ಪ ಕಾಲದ‌ ಅಸೌಖ್ಯದಿಂದ ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಉಜಿರೆ ನಿವಾಸಿಯಾಗಿರುವ ಸುಂದರ ಗೌಡ ಅವರು ಆರಂಭದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದು, ಜಿಲ್ಲಾ ಪಂಚಾಯತು ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಉಜಿರೆ ಸೇವಾ ಸಹಕಾರಿ ಬ್ಯಾಂಕಿನ ದಶಕಗಳ ಕಾಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿ ಗಳನ್ನು ನಿರ್ವಹಿಸಿದ್ದರು.

- Advertisement -

Latest News

error: Content is protected !!