ಬೆಂಗಳೂರು: ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಸಚಿವ, ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ(95) ವಿಧಿವಶರಾಗಿದ್ದಾರೆ,
ವಯೋಸಜಹ ಕಾಯಿಲೆಗಳಿಂದ ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು.6 ಬಾರಿ ಶಾಸಕರಾಗಿದ್ದ ಅವರು, ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಪ್ರಭಾವವನ್ನ ಹೊಂದಿದ್ರು. ಜೂನ್ 16, 1930 ರಂದು ದಾವಣಗೆರೆಯಲ್ಲಿ ಜನಿಸಿದ ಇವರು, ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಅಖಿಲ ಭಾರತ ವೀರಶೈವ ಮಹಾಸಭಾ ಕಟ್ಟಿದ್ದ ಶಿವಶಂಕರಪ್ಪನವರಿಗೆ ಮಹಾಸಭಾದಿಂದ ಅಂತಿಮ ನಮನ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ಬಳ್ಳಾರಿ ರಸ್ತೆ,ಪ್ಯಾಲೇಸ್ ಗ್ರೌಂಡ್ ಎರುರಿನ ಮುಖ್ಯ ಕಚೇರಿಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ. ರಾಜಕೀಯ ಗಣ್ಯರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆಯೊಳಗೆ ದಾವಣಗೆರೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ ಎಂದು ಮಹಾಸಭಾದ ಮೂಲಗಳು ತಿಳಿಸಿವೆ.


