Friday, June 5, 2026
Homeಕರಾವಳಿಬೆಳ್ತಂಗಡಿ: ಹಿರಿಯ ದಲಿತ ನಾಯಕ ಪಿ.ಡೀಕಯ್ಯ ಸಾವು ಪ್ರಕರಣ: ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ರಾಜ್ಯ...

ಬೆಳ್ತಂಗಡಿ: ಹಿರಿಯ ದಲಿತ ನಾಯಕ ಪಿ.ಡೀಕಯ್ಯ ಸಾವು ಪ್ರಕರಣ: ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ

- Advertisement -
- Advertisement -

ಬೆಳ್ತಂಗಡಿ: ಕಳೆದ ಜುಲೈ 6 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದ ಪಿ ಡೀಕಯ್ಯ ರವರು ಕುಸಿದು ಬಿದ್ದು ತಲೆಗೆ ಗಾಯಗೊಂಡ ಸ್ಥಿತಿಯಲ್ಲಿ ಬಿದಿದ್ದವರನ್ನು  ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅವರು. ಜುಲೈ 8 ರಂದು ನಿಧನರಾಗಿದ್ದರು. ಮನೆಯವರ ಒಪ್ಪಿಗೆಯಂತೆ ಅಂಗಾಂಗಗಳ ದಾನ ಮಾಡಿದ ಬಳಿಕ ಜುಲೈ 9 ರಂದು ಬೆಳ್ತಂಗಡಿಯಲ್ಲಿ ಸಾರ್ವಜನಿಕ ದರ್ಶನದ ಬಳಿಕ ಬೌದ್ಧ ಧರ್ಮದ ಪ್ರಕಾರ ಹುಟ್ಟೂರು ತಾಲೂಕಿನ ಕಣಿಯೂರು ಗ್ರಾಮದ ಪೊಯ್ಯದಲ್ಲಿe ಧಪನ ಕಾರ್ಯ ನಡೆದಿತ್ತು.

ಬಳಿಕ ಜುಲೈ 15 ರಂದು ಪಿ ಡೀಕಯ್ಯ ಅವರ ಮನೆಯವರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು ನೀಡಿದರು ‌. ಈ ಭಾಗವಾಗಿ ಜುಲೈ 18 ರಂದು ಬೆಳ್ತಂಗಡಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಶವವನ್ನು ಹೊರತೆಗೆದು ಜಿಲ್ಲೆಯ ವೈದ್ಯಕಾರಿಗಳ ತಂಡದ ಜೊತೆಗೆ ಶವ ಪರೀಕ್ಷೆ ಮಾಡಲಾಗಿತ್ತು‌.

ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಸಿದ ಬೆಳ್ತಂಗಡಿ ಪೋಲಿಸರು ಮನೆಯವರ ದೂರಿನ ಆಧಾರದಲ್ಲಿ ತನಿಖೆ ನಡೆಸಿ ಹಲವರನ್ನು ತನಿಖೆಗೆ ಒಳಪಡಿಸಿದರು.  ಈ ಮಧ್ಯೆ ಡೀಕಯ್ಯ ಅವರು ಕುಟುಂಬಸ್ಥರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಪ್ರಕರಣದ ಬಗ್ಗೆ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ಸಿಐಡಿ ತನಿಖೆಗೆ ಒತ್ತಾಯಿಸಿದ್ದರು. ಇದೀಗ ನವೆಂಬರ್ 4 ರಂದು ಘಟನೆಯ ಬಗ್ಗೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಬೆಳ್ತಂಗಡಿ ಪೋಲಿಸ್ ಠಾಣೆಯಿಂದ ಪ್ರಕರಣದ ದಾಖಲೆಗಳನ್ನು ಸಿಐಡಿ ಇಲಾಖೆಗೆ ಒಪ್ಪಿಸುವಂತೆ ಆದೇಶಿಸಿದೆ. ಒಟ್ಟಾರೆ ಇಡೀ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸಿದೆ.

- Advertisement -

Latest News

error: Content is protected !!