Monday, June 8, 2026
Homeಇತರಹಿರಿಯ ಪತ್ರಕರ್ತ, ಬಿಜೆಪಿಯ ಮಾಜಿ ಸಂಸದ ಚಂದನ್ ಮಿತ್ರಾ ನಿಧನ...!

ಹಿರಿಯ ಪತ್ರಕರ್ತ, ಬಿಜೆಪಿಯ ಮಾಜಿ ಸಂಸದ ಚಂದನ್ ಮಿತ್ರಾ ನಿಧನ…!

- Advertisement -
- Advertisement -

ದೆಹಲಿ: ಹಿರಿಯ ಪತ್ರಕರ್ತ, ಬಿಜೆಪಿ ಮಾಜಿ ರಾಜ್ಯಸಭಾ ಸದಸ್ಯ ಚಂದನ್ ಮಿತ್ರಾ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಚಂದನ್ ಮಿತ್ರಾ, ತಡರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪುತ್ರ ಕುಶನ್ ಮಿತ್ರಾ ತಿಳಿಸಿದ್ದಾರೆ.

ಮೂಲತಃ ಪಶ್ಚಿಮ ಬಂಗಾಳದವರಾದ ಮಿತ್ರಾ, 2010ರಲ್ಲಿ ಬಿಜೆಪಿಯಿಂದ ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 2018ರಲ್ಲಿ ಟಿಎಂಸಿ ಸೇರ್ಪಡೆಯಾಗಿದ್ದರು.

ಇನ್ನು ಚಂದನ್ ಮಿತ್ರಾ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದು, “ಚಂದನ್ ಮಿತ್ರ ಅವರು ತಮ್ಮ ಬುದ್ಧಿಶಕ್ತಿ ಮತ್ತು ಒಳನೋಟಗಳಿಂದ ನೆನಪಿನಲ್ಲಿ ಉಳಿಯುತ್ತಾರೆ. ಅವರು ಮಾಧ್ಯಮ ಹಾಗೂ ರಾಜಕೀಯ ಜಗತ್ತಿನಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡರು. ಅವರ ನಿಧನ ಸುದ್ದಿ ನೋವುಂಟು ಮಾಡಿದೆ” ಎಂದು ಹೇಳಿದ್ದಾರೆ.

- Advertisement -

Latest News

error: Content is protected !!