- Advertisement -


- Advertisement -
ಮಂಗಳೂರು: ಪತ್ರಿಕಾ ರಂಗದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಹಿರಿಯ ಪತ್ರಕರ್ತ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅವರನ್ನು 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನೀಡಲಾಗುವ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ, ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಪಿ.ಬಿ. ಹರೀಶ್ ರೈ ಅವರ ಆಯ್ಕೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ನವೆಂಬರ್ 20ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
- Advertisement -


