- Advertisement -
- Advertisement -
ಬೆಂಗಳೂರು; ಹಿರಿಯ ಪತ್ರಕರ್ತ ,ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ವಸಂತ ನಾಡಿಗೇರ(59) ಇಂದು (ಸೋಮವಾರ) ಬೆಳಗ್ಗಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೂರೂವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಚಟುವಟಿಕೆಯಿಂದ ಕೆಲಸ ಮಾಡುತ್ತಿದ್ದ ವಸಂತ ನಾಡಿಗೇರ ಅವರು ತಮ್ಮ ವಿಶಿಷ್ಟ ಮಾತಿನ ಶೈಲಿ ಹಾಗೂ ವಿಭಿನ್ನ ಹೆಡ್ಡಿಂಗ್‌ಗಳ ಮೂಲಕವೇ ಸುದ್ದಿ ಮನೆಗಳಲ್ಲಿ ಜನಪ್ರಿಯರಾಗಿದ್ದರು. ಸರಳ, ಸಜ್ಜನಿಕೆಯ ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ. ವಿಶ್ವವಾಣಿ ನಂತರ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ.
- Advertisement -