Monday, May 17, 2021
Homeಕರಾವಳಿಮಂಗಳೂರಿನ ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ನಿಧನ

ಮಂಗಳೂರಿನ ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ನಿಧನ

- Advertisement -
- Advertisement -

ಮಂಗಳೂರು: ಮಂಗಳೂರಿನ ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಬೆಳಗ್ಗೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸುರೇಂದ್ರ ಶೆಟ್ಟಿ  ಮಂಗಳೂರು ವಿ.ವಿ.ಯಲ್ಲಿ ಸಮೂಹ‌ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಅವರು ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಕೆಲ ಕಾಲ ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಮುಖ್ಯಸ್ಥರಾಗಿದ್ದರು. ಮಂಗಳೂರು ವಿ.ವಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದ ಹಳೆ ವಿದ್ಯಾರ್ಥಿಗಳ ಸಂಘ ‘ಎಂಎಎಎಂ’ ಇದರ ಸ್ಥಾಪಕ ಗೌರವಾಧ್ಯಕ್ಷರಾಗಿದ್ದರು. ವಿಭಾಗದ ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾಗಿದ್ದರು.ಅವರು ಪತ್ನಿ, ಪುತ್ರಿ ಹಾಗು ಬಂಧುಬಳಗವನ್ನು ಅಗಲಿದ್ದಾರೆ.

- Advertisement -
- Advertisment -

Latest News

error: Content is protected !!