- Advertisement -
- Advertisement -
ಮಂಗಳೂರು; ಅನಾರೋಗ್ಯದಿಂದ ಹಿರಿಯ ಪೊಲೀಸ್ ಕಾನ್ಸ್‌ಟೇಬಲ್ ನಿಧನರಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಿರಿಯ ಪೊಲೀಸ್ ಕಾನ್ಸ್ ಟೇಬಲ್ ಸುನೀಲ್ (50) ಮೃತ ಪೊಲೀಸ್ ಕಾನ್ಸ್‌ಟೇಬಲ್ .
ಸುನೀಲ್ ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮೂಲತಃ ಕಾಸರಗೋಡಿನವರಾದ ಸುನೀಲ್ ಅವರು 1996 ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಬಳಿಕ ಉಡುಪಿ ಹಾಗೂ ಮಂಗಳೂರಿನ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಮಂಗಳೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಸುನೀಲ್ ಅವರ ನಿಧನಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.
- Advertisement -