Wednesday, June 24, 2026
Homeತಾಜಾ ಸುದ್ದಿಕುತೂಹಲ ಕೆರಳಿಸಿದ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿ!

ಕುತೂಹಲ ಕೆರಳಿಸಿದ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿ!

- Advertisement -
- Advertisement -

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ, ರೈಲ್ವೇ ವಿಭಾಗದ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ರೈಲ್ವೆ ವಿಭಾಗದಲ್ಲಿ ಎಡಿಜಿಪಿ ಆಗಿರುವ ಭಾಸ್ಕರರಾವ್ ಅವರು ಗೃಹ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ.ಬೆಂಗಳೂರು ನಗರ ಪೊಲೀಸ್ ಆಯುಕ್ತ ಹುದ್ದೆ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ ಅವರು ಸ್ವಯಂ ನಿವೃತ್ತಿ ಪಡೆಯಲು ಮುಂದಾಗಿರುವುದು ಏಕೆ ಎಂಬುದು ನಿಗೂಢವಾಗಿದ್ದರೂ ಕೂಡ ಹಲವು ಅನುಮಾನಗಳು ಮೂಡಿಸಿವೆ.

ಇನ್ನು ಸ್ವಯಂ ನಿವೃತ್ತಿ ಸಿಗುತ್ತಿದ್ದಂತೆ ಭಾಸ್ಕರ್ ರಾವ್ ರಾಜಕೀಯ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳುತ್ತಿದ್ದು, ಬಸವನಗುಡಿ ಅಥವಾ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವ ಮಾತುಗಳು ಕೇಳಿಬರುತ್ತಿವೆ. ಭಾಸ್ಕರ್ ರಾವ್ ಅವರಿಗೆ ಕಾಂಗ್ರೆಸ್ ಅಥವಾ ಎಎಪಿಯಿಂದ ಟಿಕೆಟ್ ಸಿಗುವ ಸಾಧ್ಯತೆ ಇರುವುದಾಗಿ ಮೂಲಗಳು ಹೇಳಿವೆ.

- Advertisement -

Latest News

error: Content is protected !!