- Advertisement -
- Advertisement -
ಬೆಳ್ತಂಗಡಿ: ಕಳೆದ 13 ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅವರ ಧರ್ಮಸ್ಥಳ ಗ್ರಾಮದ ಪಾಂಗಳ ಮನೆಗೆ ಆರ್.ಎಸ್.ಎಸ್. ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಆ.26 ರಂದು ಭೇಟಿ ನೀಡಿದರು.
ಸೌಜನ್ಯ ಅವರ ತಾಯಿ ಕುಸುಮಾವತಿ ಅವರೊಂದಿಗೆ ಡಾ. ಪ್ರಭಾಕರ ಭಟ್ ಮಾತುಕತೆ ನಡೆಸಿ ಕುಟುಂಬಕ್ಕೆ ಧೈರ್ಯ ತುಂಬಿದರು. ಕಳೆದ ಒಂದು ದಶಕಕ್ಕೂ ಹೆಚ್ಚು ಸಮಯದಿಂದ ನಿರಂತರ ಹೋರಾಟ ಮಾಡುತ್ತಾ ಬಂದಿದ್ದೀರಾ ನ್ಯಾಯಕ್ಕಾಗಿನ ಹೋರಾಟವನ್ನು ಮುಂದುವರಿಸಿ ಸದಾ ಸೌಜನ್ಯ ಕುಟುಂಬಸ್ಥರೊಂದಿಗೆ ಇರುವುದಾಗಿ ಭರವಸೆ ನೀಡಿದರು.
ಈ ವೇಳೆ ಉದ್ಯಮಿ ಸದಾನಂದ ನಾವರ, ಬಾಲಕೃಷ್ಣ ಬಿರ್ಮೊಟ್ಟು, ಪುರಂದರ, ಮೋಹನ್ ಶೆಟ್ಟಿ ಉಜಿರೆ ಮತ್ತಿತರರು ಉಪಸ್ಥಿತರಿದ್ದರು.
- Advertisement -


