- Advertisement -
![]()
- Advertisement -
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿಯರು ಸಿಎಂ ಸಿದ್ದರಾಮಯ್ಯರಿಗೆ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಮಾಡಿದರು.
ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಶೃತಿ, ಜಯಮಾಲ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.
ಅಷ್ಟೇಅಲ್ಲದೆ ಇತ್ತೀಚೆಗಷ್ಟೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.
- Advertisement -


