Sunday, May 5, 2024
Homeತಾಜಾ ಸುದ್ದಿಸುಪ್ರೀಂಕೋರ್ಟ್‌ ಹಿರಿಯ ವಕೀಲ ಫಾಲಿ ನಾರಿಮನ್ ನಿಧನ

ಸುಪ್ರೀಂಕೋರ್ಟ್‌ ಹಿರಿಯ ವಕೀಲ ಫಾಲಿ ನಾರಿಮನ್ ನಿಧನ

spot_img
- Advertisement -
- Advertisement -

ಖ್ಯಾತ ನ್ಯಾಯಶಾಸ್ತ್ರಜ್ಞ ಮತ್ತು ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಫಾಲಿ ನಾರಿಮನ್ ಇಂದು ನಿಧನರಾಗಿದ್ದಾರೆ.

95 ವರ್ಷದ ಫಾಲಿ ನಾರಿಮನ್ ಇಂದು ಬೆಳಗ್ಗೆ ದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಖ್ಯಾತ ನ್ಯಾಯಶಾಸ್ತ್ರಜ್ಞ  ಫಾಲಿ ನಾರಿಮನ್ ಅವರಿಗೆ 1991ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಅವರ ಪುತ್ರ ರೋಹಿಂಟನ್ ನಾರಿಮನ್ ಕೂಡ ಹಿರಿಯ ವಕೀಲರಾಗಿದ್ದು, ಈಗ ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಯಾಗಿದ್ದಾರೆ.

ಫಾಲಿ ನಾರಿಮನ್ ಅವರು 1971 ರಿಂದ ಸುಪ್ರೀಂಕೋರ್ಟ್‌ ನ ಹಿರಿಯ ವಕೀಲರಾಗಿದ್ದರು. 1991ರಿಂದ 2010ರವರೆಗೆ ಭಾರತದ ವಕೀಲರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. 1989–2005ರವರೆಗೆ ಪ್ಯಾರಿಸ್‌ನಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಮಂಡಳಿಯ ನ್ಯಾಯಾಲಯದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಜಲವಿವಾದಗಳಲ್ಲಿ ಕರ್ನಾಟಕದ ಪರವಾಗಿ ಸಮರ್ಥ ವಾದ ಮಂಡಿಸಿ ಹಲವು ವ್ಯಾಜ್ಯಗಳಲ್ಲಿ ಜಯ ತಂದು ಕೊಟ್ಟಿದ್ದರು.

- Advertisement -
spot_img

Latest News

error: Content is protected !!