Thursday, June 4, 2026
Homeಕರಾವಳಿಉಡುಪಿಉಡುಪಿ: ಲೋಕಸಭಾ ಚುನಾವಣೆಗೆ ಮತದಾನ ಮಾಡಿ ಮೃತಪಟ್ಟ ವಯೋವೃದ್ಧೆ

ಉಡುಪಿ: ಲೋಕಸಭಾ ಚುನಾವಣೆಗೆ ಮತದಾನ ಮಾಡಿ ಮೃತಪಟ್ಟ ವಯೋವೃದ್ಧೆ

- Advertisement -
- Advertisement -

ಉಡುಪಿ: ಲೋಕಸಭಾ ಚುನಾವಣೆಗೆ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವಯೋವೃದ್ದೆಯೊಬ್ಬರು ಮೃತಪಟ್ಟಿದ್ದಾರೆ.

ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿಯಾಗಿದ್ದ ಯಶೋಧಾ ನಾರಾಯಣ ಉಪಾಧ್ಯ (83) ಮತದಾನ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಕೊನೆಯುಸಿರೆಳೆದಿದ್ದಾರೆ.

ಮತದಾನ ಮಾಡಿದ ದಿನ ಯಶೋಧಾ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತಾದರೂ ಮತದಾನ ಮಾಡಿದ ಬಳಿಕ ತೆರಳಲು ನಿಶ್ಚಯಿಸಿದ್ದರು.

ಹೀಗಾಗಿ ಮತದಾನ ಮಾಡಿದ ನಂತರ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.‌ ರಾತ್ರಿ 9 ಗಂಟೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ‌.

- Advertisement -

Latest News

error: Content is protected !!