Wednesday, June 24, 2026
Homeಕರಾವಳಿಮಂಗಳೂರುಪುತ್ತೂರು; ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ಯುವತಿಗೆ ಕಿರುಕುಳ ನೀಡಿದ...

ಪುತ್ತೂರು; ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪಿಗೆ ಶಿಕ್ಷೆ ಪ್ರಕಟ

- Advertisement -
- Advertisement -

ಪುತ್ತೂರು; ದಿನಾಂಕ :25.04.2022 ರಂದು ಕೆ ಎಸ್ ಆರ್ ಟಿ ಸಿ ಬಸ್‌ ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಸಮಯ ಯುವತಿ ಕುಳಿತಿದ್ದ ಸೀಟಿನ ಪಕ್ಕಕ್ಕೆ ಕುಳಿತಿದ್ದ ಆರೋಪಿ ಮೊಹಮ್ಮದ್  ಸತ್ತಾರ್ ಮಾಡ್ನೂರು ಗ್ರಾಮದ ನಿವಾಸಿ ಎಂಬಾತನು ಬಸ್ಸು ಸಂಚರಿಸುತ್ತಿದ್ದ ಸಮಯ   ಲೈಂಗಿಕ  ಕಿರಿಕುಳ ನೀಡಿರುವ ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿ ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರಾಗಿದ್ದ ರಾಜೇಶ್ ಕೆ ವಿ ರವರು ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಪ್ರಕರಣದಲ್ಲಿ ಮಾನ್ಯ ಪ್ರಧಾನ ಹಿರಿಯ ಸಿವಿಲ್ ಮತ್ತು ಎ ಸಿ ಜೆ ಎಂ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಪ್ರಕೃತಿ ಕಲ್ಯಾಣಪುರ್ ರವರು ಆರೋಪಿಯ ಮೇಲೆ ಆರೋಪ ಸಾಬೀತಾಗಿದೆ ಎಂದು ನಾಲ್ಕು ತಿಂಗಳಗಳ ಕಾರವಾಸ ಮತ್ತು 10,000 ರೂ ದಂಡ ಹಾಗೂ  ದಂಡ ನೀಡಲು ತಪ್ಪಿದಲ್ಲಿ ಒಂದು ತಿಂಗಳ ಕಾಲ ಹೆಚ್ಚುವರಿ ಕಾರವಾಸ ಶಿಕ್ಷೆಯನ್ನು ವಿಧಿಸಿರುತ್ತಾರೆ. ಸರ್ಕಾರದ ಪರ ಸಹಾಯಕ ಸರಕಾರಿ ಅಭಿಯೋಜಕರಾಗಿ ಕವಿತಾ ಕೆ ರವರು ವಾದಿಸಿರುತ್ತಾರೆ.

- Advertisement -

Latest News

error: Content is protected !!