Friday, June 5, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸೆಪ್ಟೆಂಬರ್ ನಿಂದ ಶನಿವಾರ ಕೂಡ ತರಗತಿ ನಡೆಸಲು ಶಿಕ್ಷಣ ಇಲಾಖೆ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸೆಪ್ಟೆಂಬರ್ ನಿಂದ ಶನಿವಾರ ಕೂಡ ತರಗತಿ ನಡೆಸಲು ಶಿಕ್ಷಣ ಇಲಾಖೆ ಸೂಚನೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ  ಸಾಲು ಸಾಲು ರಜೆ ನೀಡಿದ್ದರಿಂದ ಅದನ್ನು ಸರಿದೂಗಿಸಲು ಸೆಪ್ಟೆಂಬರ್ ನಿಂದ ಶನಿವಾರ ಪೂರ್ಣ ತರಗತಿ ನಡೆಸಲು ಶಿಕ್ಷಣ ಇಲಾಖೆ ಸೂಚಿಸಿದೆ.

ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರ ಇಡೀ ದಿನ ಶಾಲೆ ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.

ಜುಲೈನಲ್ಲಿ ಸುರಿದ ಅತೀ ಹೆಚ್ಚು ಮಳೆಗೆ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಯ ನಿರ್ದೇಶನದಂತೆ ಏಳು ದಿನ ರಜೆ ಸಾರಲಾಗಿತ್ತು. ಅಂದಿನ ರಜೆಗಳನ್ನು ಭರ್ತಿ ಮಾಡಲು 14 ಶನಿವಾರಗಳಂದು ಇಡೀ ದಿನ ತರಗತಿ ನಡೆಸಲು ನಿರ್ಧರಿಸಲಾಗಿದೆ ಎಂದು ಉಪನಿರ್ದೇಶಕರು ತಿಳಿಸಿದ್ದಾರೆ.

- Advertisement -

Latest News

error: Content is protected !!