Thursday, June 4, 2026
Homeಕರಾವಳಿಮಂಗಳೂರುಗುಂಡ್ಯದಲ್ಲಿ ಕೆಎಸ್ ಆರ್ ಟಿಸಿ ಬಸ್,  ಖಾಸಗಿ ಬಸ್ ಹಾಗೂ ಕಾರಿನ ಮಧ್ಯೆ ಸರಣಿ ಅಪಘಾತ;...

ಗುಂಡ್ಯದಲ್ಲಿ ಕೆಎಸ್ ಆರ್ ಟಿಸಿ ಬಸ್,  ಖಾಸಗಿ ಬಸ್ ಹಾಗೂ ಕಾರಿನ ಮಧ್ಯೆ ಸರಣಿ ಅಪಘಾತ; ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ

- Advertisement -
- Advertisement -

ಗುಂಡ್ಯ; ಕೆಎಸ್ ಆರ್ ಟಿಸಿ ಬಸ್,  ಖಾಸಗಿ ಬಸ್ ಹಾಗೂ ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ  ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ನಸುಕಿನ ವೇಳೆ ನಡೆದಿದೆ.


ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದಾ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಮತ್ತು ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!