Friday, December 6, 2024
Homeತಾಜಾ ಸುದ್ದಿತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಸರಣಿ ಅಪಘಾತ: ಹಲವರಿಗೆ ಗಾಯ

ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಸರಣಿ ಅಪಘಾತ: ಹಲವರಿಗೆ ಗಾಯ

spot_img
- Advertisement -
- Advertisement -

ಮಂಗಳೂರು: ಐದು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಹಲವರಿಗೆ ಗಾಯಗಳಾದ ಘಟನೆ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ರವಿವಾರ ರಾತ್ರಿ ನಡೆದಿದೆ.

ತೊಕ್ಕೊಟ್ಟುವಿನಿಂದ ಮಂಗಳೂರಿಗೆ ಬರುತ್ತಿದ್ದ ಇನೋವಾ ಕಾರು ಎದುರುಗಡೆಯಿದ್ದ ವಾಹನವೊಂದನ್ನು ಓವರ್ ಟೇಕ್ ಮಾಡಲು ಏಕಾಏಕಿ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಸರಣಿ ಅಪಘಾತಕ್ಕೆ ಕಾರಣವಾಗಿದೆ.

ಹಿಂಬದಿಯಲ್ಲಿದ್ದ ಕಾರೊಂದು ಇನೋವಾ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಬಳಿಕ ರಸ್ತೆಯಲ್ಲಿ ಒಂದು ಸುತ್ತು ತಿರುಗಿದ ಪರಿಣಾಮ ಆ ರಸ್ತೆಯಲ್ಲಿ ಕಾರಿನ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆ ನಡೆದ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಸರಣಿ ಅಪಘಾತಕ್ಕೆ ಕಾರಣವಾದ ಇನೋವಾ ಕಾರು ಪರಾರಿಯಾಗಿದೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!