Tuesday, September 29, 2026
Homeಕರಾವಳಿಕರಂಗಲಪಾಡಿಯ ಕೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ; ಇಬ್ಬರಿಗೆ ಗಾಯ

ಕರಂಗಲಪಾಡಿಯ ಕೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ; ಇಬ್ಬರಿಗೆ ಗಾಯ

- Advertisement -
- Advertisement -

ಮಂಗಳೂರು: ನಗರದ ಕರಂಗಲಪಾಡಿಯ ಕೋರ್ಟ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿದ್ದಾರೆ.

ಕೋರ್ಟ್ ರಸ್ತೆಯ ಇಳಿಜಾರಿನಲ್ಲಿ ಬರುತ್ತಿದ್ದ ಗೂಡ್ಸ್ ಆಟೋ ಹಾಗೂ ಕರಂಗಲಪಾಡಿ ಕಡೆಯಿಂದ ಕೋರ್ಟ್ ರಸ್ತೆಗೆ ಪ್ರವೇಶಿಸುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಸಮೀಪದಲ್ಲಿದ್ದ ದ್ವಿಚಕ್ರ ವಾಹನಕ್ಕೂ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಹಾಗೂ ಗೂಡ್ಸ್ ಆಟೋ ಚಾಲಕ ಗಾಯಗೊಂಡಿದ್ದು, ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಮೂರು ವಾಹನಗಳು ಜಖಂಗೊಂಡಿವೆ. ಮಾಹಿತಿ ಪಡೆದ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!