Friday, June 5, 2026
Homeಕರಾವಳಿಪುತ್ತೂರಿನಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಪುತ್ತೂರಿನಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಪುತ್ತೂರು: ಕಾರು, ಎರಡು ಅಟೋ ರಿಕ್ಷಾ ಮತ್ತು ಬೈಕೊಂದರ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಾಣಿ ಮೈಸೂರು ರಾಜ್ಯ ರಸ್ತೆಯಲ್ಲಿನ ಮುಕ್ರಂಪಾಡಿ ಎಂಬಲ್ಲಿ ನಡೆದಿದೆ.

ಮುಂಡೂರು ಕಡೆಯಿಂದ ಬರುತ್ತಿದ್ದ ಕಾರು ಮುಕ್ರಂಪಾಡಿ ಮುಖ್ಯರಸ್ತೆಗೆ ಸಂಪರ್ಕಿಸುವ ಸಂದರ್ಭದಲ್ಲಿ ಅಪಘಾತ ತಪ್ಪಿಸಲು ಪುತ್ತೂರಿನಿಂದ ಸಂಪ್ಯ ಕಡೆಗೆ ತೆರಳುತ್ತಿದ್ದ ಅಟೋ ರಿಕ್ಷಾವೊಂದರ ಚಾಲಕ ತಕ್ಷಣ ಬ್ರೇಕ್ ಹಾಕಿ ತನ್ನ ಅಟೋವನ್ನು ನಿಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಹಿಂಭಾಗದಿಂದ ಬರುತ್ತಿದ್ದ ಅಟೋರಿಕ್ಷಾ ನಿಲ್ಲಿಸಿದ್ದ ರಿಕ್ಷಾಕ್ಕೆ ಡಿಕ್ಕಿಯಾಗಿದೆ.

ಇದರಿಂದಾಗಿ ಅಟೋ ರಸ್ತೆಯ ಮಧ್ಯಭಾಗಕ್ಕೆ ವಾಲಿದ್ದರಿಂದ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬೈಕ್ ಅಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ಉರುಳಿ ಬಿದ್ದಿತ್ತು. ಬೈಕ್‍ನಲ್ಲಿದ್ದ ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!