Wednesday, June 24, 2026
Homeಅಪರಾಧಉಡುಪಿಯಲ್ಲಿ ಸರಣಿ ಮನೆಗಳ್ಳತನ ಪ್ರಕರಣ; ಅಂತರಾಜ್ಯ ಕಳ್ಳನ ಬಂಧನ..!

ಉಡುಪಿಯಲ್ಲಿ ಸರಣಿ ಮನೆಗಳ್ಳತನ ಪ್ರಕರಣ; ಅಂತರಾಜ್ಯ ಕಳ್ಳನ ಬಂಧನ..!

- Advertisement -
- Advertisement -

ಉಡುಪಿ: ಸರಣಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಂತರಾಜ್ಯ ಕಳ್ಳನನ್ನು ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿ ಮೊಹಮ್ಮದ್ ಆಸೀಫ್ ಬೆಟಗೇರಿ (28) ಎನ್ನಲಾಗಿದೆ.

ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಗ್ರಾಮದ ಕೊಡಂಕೂರು ನ್ಯೂ ಕಾಲೋನಿಯಲ್ಲಿ ಜುಲೈ 5ರಂದು ಮೂರು ಮನೆಗಳಲ್ಲಿ ರಾತ್ರಿ ವೇಳೆ ಕಳ್ಳತನ ನಡೆದಿದ್ದು, ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಆಸೀಫ್, ತನ್ನ ಸಹಚರರೊಂದಿಗೆ ವಾಹನದಲ್ಲಿ ಬಂದು ಮಧ್ಯರಾತ್ರಿ ಕೊಡಂಕೂರಿನ ಮೂರು ಮನೆಗಳ ಬೀಗ ಒಡೆದು ಒಳ ನುಗ್ಗಿದ್ದಾಗಿ ಒಪ್ಪಿಕೊಂಡಿದ್ದಾನೆ. ಕಳವು ಮಾಡಿದ ಚಿನ್ನಾಭರಣ ಮತ್ತು ಹಣವನ್ನು ಭಟ್ಕಳ ಮತ್ತು ಶಿರಸಿಯಲ್ಲಿ ಮಾರಾಟ ಮಾಡಿ ಹಣ ಗಳಿಸಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಆರೋಪಿ ನೀಡಿದ ಮಾಹಿತಿ ಆಧರಿಸಿ, ಪೊಲೀಸರು ಭಟ್ಕಳ ಮತ್ತು ಶಿರಸಿಯಲ್ಲಿ ಮಾರಾಟ ಮಾಡಿದ್ದ ಸುಮಾರು 95.5 ಗ್ರಾಂ ತೂಕದ ಚಿನ್ನಾಭರಣ ಮತ್ತು 255 ಗ್ರಾಂ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ ಸುಮಾರು 8.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

- Advertisement -

Latest News

error: Content is protected !!