Monday, June 8, 2026
Homeತಾಜಾ ಸುದ್ದಿಮುಂಬೈ: ದುಬೈನಿಂದ ಆಗಮಿಸುವಂತಹ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆಯೊಂದಿಗೆ ಏಳು ದಿನಗಳ ಹೋಮ್ ಕ್ವಾರಂಟೈನ್‌ ಕಡ್ಡಾಯ...!

ಮುಂಬೈ: ದುಬೈನಿಂದ ಆಗಮಿಸುವಂತಹ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆಯೊಂದಿಗೆ ಏಳು ದಿನಗಳ ಹೋಮ್ ಕ್ವಾರಂಟೈನ್‌ ಕಡ್ಡಾಯ…!

- Advertisement -
- Advertisement -

ಮುಂಬೈ: ಮಹಾರಾಷ್ಟ್ರದಲ್ಲಿ ಶುಕ್ರವಾರ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 100 ರ ಗಡಿಯನ್ನು ದಾಟಿದ ಹಿನ್ನೆಲೆಯಲ್ಲಿ ದುಬೈನಿಂದ ಆಗಮಿಸುವಂತಹ ಮುಂಬೈ ನಿವಾಸಿಗಳಿಗೆ ಆರ್‌ಟಿಪಿಸಿಆರ್ ಪರೀಕ್ಷೆಯೊಂದಿಗೆ ಏಳು ದಿನಗಳ ಹೋಮ್ ಕ್ವಾರಂಟೈನ್‌ಗೆ ಒಳಗಾಗುವುದನ್ನು ಕಡ್ಡಾಯಗೊಳಿಸಿ ಗ್ರೇಟರ್ ಮುಂಬೈ ಮಹಾನಗರ ಪಾಲಿಕೆಯು ಆದೇಶವನ್ನು ಹೊರಡಿಸಿದೆ.

ಶುಕ್ರವಾರ ಬಿ.ಎಮ್.ಸಿ ಹೊರಡಿಸಿದಂತಹ ಆದೇಶದಲ್ಲಿ, ದುಬೈನಿಂದ ಹಿಂದಿರುಗುವ ಪ್ರಯಾಣಿಕರು ಏಳನೇ ದಿನದಂದು ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆಯನ್ನು ಮಾಡಿಸಬೇಕು ಎಂದಿದೆ.

ಒಂದು ವೇಳೆ ಕೋವಿಡ್ ಪಾಸಿಟಿವ್ ಇದ್ದರೆ, ಪ್ರಸ್ತುತ ಮಾರ್ಗಸೂಚಿಗಳ ಪ್ರಕಾರವಾಗಿ ಪ್ರಯಾಣಿಕರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ವರ್ಗಾಯಿಸಲಾಗುತ್ತದೆ. ಮಹಾರಾಷ್ಟ್ರದ ಇತರ ಭಾಗಗಳಿಂದ ಬರುವಂತಹ ಪ್ರಯಾಣಿಕರು ಸಾರ್ವಜನಿಕ ಸಾರಿಗೆಯನ್ನು ತೆಗೆದುಕೊಳ್ಳಲು ಅನುಮತಿಸುವುದಿಲ್ಲ ಎಂಬುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!