Tuesday, October 27, 2026
Homeಕರಾವಳಿಖಾಸಗಿ ಪದವಿ ಕಾಲೇಜೊಂದರ ಏಳು ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್; ಸಂತ್ರಸ್ತ ವಿದ್ಯಾರ್ಥಿ ನೀಡಿದ ದೂರಿನಂತೆ...

ಖಾಸಗಿ ಪದವಿ ಕಾಲೇಜೊಂದರ ಏಳು ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್; ಸಂತ್ರಸ್ತ ವಿದ್ಯಾರ್ಥಿ ನೀಡಿದ ದೂರಿನಂತೆ ಪ್ರಕರಣ ದಾಖಲು

- Advertisement -
- Advertisement -

ಉಳ್ಳಾಲ: ದೇರಳಕಟ್ಟೆಯ ಖಾಸಗಿ ಪದವಿ ಕಾಲೇಜೊಂದರ ಏಳು ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಂತ್ರಸ್ತ ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿದೆ?; ಅ. 2ರಂದು ದೂರುದಾರ ವಿದ್ಯಾರ್ಥಿ ತನ್ನ ಸ್ನೇಹಿತರೊಂದಿಗೆ ಪ್ರಾರ್ಥನೆಗೆಂದು ಕಾಲೇಜಿನ ಹೊರಗೆ ಹೋಗಿದ್ದಾಗ ಹಿರಿಯ ವಿದ್ಯಾರ್ಥಿಗಳಾದ ಅಶಬ್ ಮತ್ತು ಅಶ್ಫಾಕ್ ಬಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಅ. 15ರಂದು ದೂರುದಾರ ವಿದ್ಯಾರ್ಥಿ ಹಾಗೂ ಆತನ ಆರು ಸ್ನೇಹಿತರು ಊಟಕ್ಕೆಂದು ಕಾಲೇಜಿನ ಮುಂಭಾಗದಲ್ಲಿರುವ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಅಶಬ್ ಎಂಬಾತ ಅವರನ್ನು ಖಾಸಗಿ ಹೋಟೆಲ್‌ನ ಕೊಠಡಿಗೆ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದಾನೆ. ಅಲ್ಲದೆ, ಹಾಡು ಹಾಡುವಂತೆ ಒತ್ತಾಯಿಸಿ, ಹಾಡದಿದ್ದರೆ ಹೊರಗೆ ಬಿಡುವುದಿಲ್ಲ ಎಂದು ಬೆದರಿಸಿದ್ದಾನೆ. ವಿದ್ಯಾರ್ಥಿಗಳು ಹಾಡಿದ್ದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಇತರರಿಗೆ ಹಂಚಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅ. 22ರಂದು ಅಶಬ್ ಹಾಗೂ ಮತ್ತೊಬ್ಬ ವಿದ್ಯಾರ್ಥಿ ಬೈಕ್‌ನಲ್ಲಿ ಬಂದು ದೂರುದಾರನ ಸ್ನೇಹಿತನನ್ನು ಜಾಹಿದ್ ಎಂಬಾತನ ಕೊಠಡಿಗೆ ಕರೆದೊಯ್ದು ರ‍್ಯಾಗಿಂಗ್ ಮಾಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಒಬ್ಬೊಬ್ಬರನ್ನಾಗಿ ಕರೆದುಕೊಂಡು ಹೋಗಿ ರ‍್ಯಾಗಿಂಗ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೈಕಾಲು ಮುರಿಯುವುದಾಗಿ ಹಾಗೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವಿದ್ಯಾರ್ಥಿ ದೂರಿನಲ್ಲಿ ಆರೋಪಿಸಿದ್ದಾನೆ.

ಈ ಸಂಬಂಧ ಅಶಬ್, ಅಶ್ಫಾಕ್ ಹಾಗೂ ಇತರರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!